ಬ್ರೇಕಿಂಗ್ ನ್ಯೂಸ್
24-09-20 12:30 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 24: ಪತಿಯೇ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ, ನೆಲ್ಯಾಡಿ ನಿವಾಸಿ ಬಿಜು(38) ಎಂಬಾತ ತನ್ನ ಪತ್ನಿ ಶೈನಿ(33) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ(63) ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜು ಹಾಗೂ ಪತ್ನಿ ಶೈನಿ ನಡುವೆ ಜಗಳ ನಡೆದು, ಪತ್ನಿ ಮನೆ ಬಿಟ್ಟು ಬಂದಿದ್ದಳು. ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತಂದೆಯ ತಮ್ಮನ ಮನೆಯಲ್ಲಿ ವಾಸವಿದ್ದರು. ಇದೇ ವೇಳೆ, ಅಲ್ಲಿಂದ ಶೈನಿ ತನ್ನ ಚಿಕ್ಕಮ್ಮ ಝಾನ್ಸಿ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು ಬೆಳಗ್ಗೆ ಶೈನಿ ಹಾಗೂ ಝಾನ್ಸಿ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು, ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಶೈನಿಯ ಚಿಕ್ಕಪ್ಪ ಏಲಿಯಸ್, ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದಾರೆ. ನೆಲ್ಯಾಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm