ಬ್ರೇಕಿಂಗ್ ನ್ಯೂಸ್
24-04-22 01:28 pm HK News Desk ಕ್ರೈಂ
ಬೆಂಗಳೂರು, ಎ.24: ಇತ್ತೀಚೆಗೆ ಬೆಂಗಳೂರಿನ ಹತ್ತಕ್ಕೂ ಶಾಲೆಗಳಿಗೆ ಬಾಂಬ್ ಇದೆಯೆಂದು ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದ್ದು ಕೇಂದ್ರ ಗುಪ್ತಚರ ದಳವೂ ತನಿಖೆ ಕೈಗೆತ್ತಿಕೊಂಡಿದೆ. ತನಿಖೆಯಲ್ಲಿ ಇ-ಮೇಲ್ ಬೆದರಿಕೆ ಸಂದೇಶ ಪಾಕಿಸ್ಥಾನ ಅಥವಾ ಸಿರಿಯಾದಿಂದ ಬಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಇ-ಮೇಲ್ ಸಂದೇಶದಲ್ಲಿ ಬಳಸಿದ ಭಾಷೆ ಮತ್ತು ಶಬ್ದಗಳು ಒಂದೇ ರೀತಿಯವಾಗಿದ್ದು, ಯಾರೋ ಒಂದೇ ತಂಡದ ಕೃತ್ಯ ಎನ್ನುವ ಶಂಕೆ ಅಧಿಕಾರಿಗಳದ್ದು, ಹೀಗಾಗಿ ಇ-ಮೇಲ್ ಸಂದೇಶ ಎಲ್ಲಿಂದ ಬಂದಿತ್ತು ಎನ್ನುವ ಬಗ್ಗೆ ಅಧಿಕಾರಿಗಳು ಸರ್ವರ್ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ರಾಜ್ಯ ಗುಪ್ತಚರ ದಳ, ಆಂತರಿಕ ಭದ್ರತಾ ದಳ ಮತ್ತು ಕೇಂದ್ರೀಯ ಗುಪ್ತಚರ ದಳ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ.

ವಿದೇಶದಿಂದ ಇ-ಮೇಲ್ ಬಂದಿರುವ ಬಗ್ಗೆ ಪ್ರಾಥಮಿಕ ಮಾಹಿತಿಗಳಿವೆ. ಹೀಗಾಗಿ ಪಾಕಿಸ್ಥಾನ ಅಥವಾ ಗಲ್ಫ್ ರಾಷ್ಟ್ರಗಳಿಂದ ಮೇಲ್ ಬಂದಿರುವ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಒಂದೇ ಸರ್ವರ್ ಆಗಿರಬಹುದೇ, ಬೇರೆ ಬೇರೆ ಸರ್ವರ್ ಗಳನ್ನು ಬಳಸಿ ಇಮೇಲ್ ಮಾಡಲಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಬೆಂಗಳೂರು ಪೊಲೀಸರು ಸೈಬರ್ ತಂತ್ರಜ್ಞರ ಮೊರೆ ಹೋಗಿದ್ದಾರೆ. ಇದೇ ವೇಳೆ, ಗೂಗಲ್ ಸಂಸ್ಥೆಯಿಂದಲೂ ತನಿಖೆಗೆ ಮಾಹಿತಿ ಪಡೆಯುವುದಕ್ಕೂ ಮುಂದಾಗಿದ್ದಾರೆ.
ಇದೇ ವೇಳೆ, ಹಳೆಯ ಬಾಂಬ್ ಬೆದರಿಕೆ ಪ್ರಕರಣಗಳ ಬಗ್ಗೆಯೂ ಪೊಲೀಸರು ಜಾಲಾಡಿದ್ದಾರೆ. ಹಳೆ ಆರೋಪಿಗಳನ್ನು ವಿಚಾರಣೆ ನಡೆಸಿ, ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆ ಬಾಂಬ್ ಇರಿಸಿದ್ದಾಗಿ ಹುಸಿ ಕರೆ ಮಾಡಿದ್ದ ಪ್ರಕರಣಗಳ ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ. ಅವರಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಇ-ಮೇಲ್ ಸಂದೇಶ ಎಲ್ಲಿಂದ ಬಂದಿತ್ತು ಅನ್ನುವುದನ್ನು ಪತ್ತೆಹಚ್ಚಲು ತನಿಖೆ ಕೈಗೊಂಡಿದ್ದಾರೆ.
13 schools in Bengaluru get hoax bomb threat, Pak work behind emails says Intellegence. As many as 13 private schools in and around the city received emails threatening that explosives have been planted on the school premises, on Friday. The police, who concluded that it is a mischief, have intensified the investigation to trace the people behind it. Reacting to the incident, Chief Minister Basavaraj Bommai said it is a conspiracy to disturb peace and tarnish the image of the state.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm