ಬ್ರೇಕಿಂಗ್ ನ್ಯೂಸ್
27-04-22 11:15 pm Bangalore Correspondent ಕ್ರೈಂ
ಬೆಂಗಳೂರು, ಎ.28 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮತ್ತೊಂದು ಭಾರೀ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ರಾಜ್ಯದ ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳ ಅವ್ಯವಹಾರದಲ್ಲಿ ಭಾಗಿಯಾಗಿದ್ದು ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ಸಿವಿಲ್ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ಮಾಡಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಡಿ ನಡೆಯುವ ಮಹತ್ವದ ಯೋಜನೆಯಲ್ಲಿ ಗೋಲ್ಮಾಲ್ ನಡೆದಿದ್ದು ಬರೋಬ್ಬರಿ 3405 ಕೋಟಿ ರೂಪಾಯಿ ದುರುಪಯೋಗ ಆಗಿರುವ ಬಗ್ಗೆ ಆರೋಪ ಕೇಳಿಬಂದಿದೆ. ಗ್ರಾಮೀಣ ಭಾಗದ ಜನರ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದ್ದು ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಅನುದಾನ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುತ್ತದೆ. ಕೇಂದ್ರ ಸರಕಾರದ ಶೇ. 75 ಮತ್ತು ರಾಜ್ಯ ಸರ್ಕಾರದ ಶೇ. 25ರ ಅನುದಾನದ ಯೋಜನೆ ಇದಾಗಿದೆ. ಕೇಂದ್ರದಿಂದ ಬಿಡುಗಡೆಯಾದ ಹಣವನ್ನು ಐಎಎಸ್ ಅಧಿಕಾರಿಗಳು ಸೇರಿ ಲೂಟಿ ಹೊಡೆದಿದ್ದಾರೆಂಬ ಗಂಭೀರ ಆರೋಪದ ಬಗ್ಗೆ ಎಸಿಬಿ ತನಿಖೆಗೆ ಆದೇಶ ನೀಡಲಾಗಿದೆ. ಈಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಬಂಡವಾಳ ಮತ್ತೊಮ್ಮೆ ಬೆಳಕಿಗೆ ಬಂದಿದೆ.
ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ನಾಲ್ಕು ತಿಂಗಳಲ್ಲಿ ಕೋರ್ಟಿಗೆ ವರದಿ ಸಲ್ಲಿಸಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೋರ್ಟ್ ಖಡಕ್ ಸೂಚನೆ ನೀಡಿದೆ. ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಕೆ. ಲಕ್ಷ್ಮಿನಾರಾಯಣ ಭಟ್ ಆದೇಶ ನೀಡಿದ್ದಾರೆ.
ಸಿಆರ್ ಪಿಸಿ ಸೆಕ್ಷನ್ 202 (1)ರ ಅಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಡಿವೈಎಸ್ಪಿಗಿಂತ ಹೆಚ್ಚಿನ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಬೇಕು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಆರೋಪಿ 1 ರಾಜ್ಯ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಅಮಿತ್ ಪ್ರಸಾದ್, ಆರೋಪಿ ಎರಡು - ಡಾ. ಇ.ವಿ ರಮಣರೆಡ್ಡಿ, ಎಸಿಎಸ್, ಇಂಡಸ್ಟ್ರೀಸ್ & ಕಾಮರ್ಸ್, ಆರೋಪಿ ಮೂರನೇ ಹೆಸರಾಗಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಾಲ್ಕನೇ ಆರೋಪಿ ಆರ್ ಡಿಪಿಆರ್ ಪದನಿಮಿತ್ತ ಅಧಿಕಾರಿ ಡಾ.ಬೋರೇಗೌಡ, ಐದನೇ ಆರೋಪಿ ಆರ್ ಡಿಪಿಆರ್ ಇಲಾಖೆಯ ಡೆಪ್ಯೂಟಿ ಸೆಕ್ರೆಟರಿ ರಾಮಕೃಷ್ಣ , ಆರನೇ ಆರೋಪಿ ಆರ್ ಡಿಪಿಆರ್ ಅಧಿಕಾರಿ ಸೀಲಮ್ ಗಿರಿ ಅವರನ್ನು ಹೆಸರಿಸಲಾಗಿದೆ.
Bengaluru Big corruption of thousand of crores exposed in which IAS officials are found involved in Panchyath Raj department.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm