ಬ್ರೇಕಿಂಗ್ ನ್ಯೂಸ್
13-06-22 09:24 pm Source: Vijayakarnataka ಡಿಜಿಟಲ್ ಟೆಕ್
ಜನಪ್ರಿಯ ಬಜೆಟ್ ಸ್ಮಾರ್ಟ್‌ಫೋನ್ ಬ್ರ್ಯಾಂಡ್ Tecno ತನ್ನ ವಿನೂತನ Tecno POVA 3 ಸ್ಮಾರ್ಟ್‌ಫೋನ್ ಅನ್ನು ದೇಶದಲ್ಲಿ ಬಿಡುಗಡೆ ಮಾಡುವ ಅಧಿಕೃತ ದಿನಾಂಕವನ್ನು ಪ್ರಕಟಿಸಿದೆ. ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ತಯಾರಿಸುವಲ್ಲಿ ಮುಂಚೂಣಿಯಲ್ಲಿರುವ Tecno ಇದೇ 15 ನೇ ತಾರೀಖಿನಂದು ದೇಶದಲ್ಲಿ ತನ್ನ ಬಹುನಿರೀಕ್ಷಿತ Tecno POVA 3 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದು, ಈಗಾಗಲೇ ಅಮೆಜಾನ್ ನಲ್ಲಿ Tecno POVA 3 ಸ್ಮಾರ್ಟ್‌ಫೋನ್ ಕುರಿತಂತೆ ಟೀಸರ್ ಒಂದನ್ನು ಬಿಡುಗಡೆ ಮಾಡಿ ಗಮನಸೆಳೆದಿರುವ Tecno ಕಂಪೆನಿ ಇದೀಗ ಡಬಲ್ ಧಮಾಕವನ್ನು ತಂದಿದೆ.
ಹೌದು, Tecno ಕಂಪೆನಿಯ ನೂತನ Tecno POVA 3 ಸ್ಮಾರ್ಟ್‌ಫೋನ್ ಕುರಿತ ಬಹುತೇಕ ಎಲ್ಲಾ ವೈಶಿಷ್ಟ್ಯಗಳು ಮೊನ್ನೆಮೊನ್ನೆಯಷ್ಟೇ ಹೊರಬಿದ್ದಿದ್ದವು. 7,000mAh ಸಾಮರ್ಥ್ಯದ ಬ್ಯಾಟರಿ ಮತ್ತು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವಿರುವ ಟ್ರಿಪಲ್ ಕ್ಯಾಮೆರಾ ಸೆಟಪ್ ಸೇರಿದಂತೆ Tecno POVA 3 ಸ್ಮಾರ್ಟ್‌ಫೋನ್ ಹೊಂದಿರುವ ಎಲ್ಲಾ ವೈಶಿಷ್ಟ್ಯಗಳು ವೈರಲ್ ಆಗಿದ್ದವು. ಇದೀಗ ಅಧಿಕೃತ ಬಿಡುಗಡೆ ದಿನಾಂಕವನ್ನು ಪ್ರಟಿಸಿರುವುದು ಮತ್ತು ಇನ್ನು ಕೇವಲ ನಾಲ್ಕು ದಿನಗಳಲ್ಲಿ Tecno POVA 3 ಸ್ಮಾರ್ಟ್‌ಫೋನ್ ಬಿಡುಗಡೆಯಾಗುತ್ತಿರುವುದು ಡಬಲ್ ಧಮಾಕವನ್ನು ತಂದಂತಿದೆ. ಹಾಗಾದರೆ, ನೂತನ Tecno POVA 3 ಸ್ಮಾರ್ಟ್‌ಫೋನ್ ಹೇಗಿದೆ ಎಂಬುದನ್ನು ನೋಡೋಣ ಬನ್ನಿ.

ಬಹುನಿರೀಕ್ಷಿತ Tecno POVA 3 ಸ್ಮಾರ್ಟ್‌ಫೋನ್ 1080 × 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ 6.9 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಸಾಮರ್ಥ್ಯವನ್ನು ಹೊಂದಿದ್ದು, 480ನಿಟ್ಸ್ ಬ್ರೈಟ್‌ನೆಶ್ ಅನ್ನು ನೀಡುತ್ತದೆ ಎಂದು ಕಂಪೆನಿ ತಿಳಿಸಿದೆ. Tecno POVA 3 ಸ್ಮಾರ್ಟ್‌ಫೋನಿನಲ್ಲಿ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಅನ್ನು ಅಳವಡಿಸಲಾಗಿದೆ. ಈ ಪ್ರೊಸೆಸರ್ 6GB + 128GB ಆಂತರಿಕ ಸಂಗ್ರಹ ಸಾಮರ್ಥ್ಯದೊಂದಿಗೆ ಜೋಡಿಯಾಗಿದೆ ಮತ್ತು ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ಕಲ್ಪಿಸಿದೆ. Tecno POVA 3 ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

Tecno POVA 3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಲ್ಡ್ ಮತ್ತು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ನೊಂದಿಗೆ ಜೋಡಿಯಾಗಿದೆ. ಹೆಚ್ಚುವರಿಯಾಗಿ ಎಐ ಹೆಚ್‌ಡಿ ಲೆನ್ಸ್ ಅನ್ನು ಸಹ ಅಳವಡಿಸಲಾಗಿದೆ. ಮುಂಬಾಗ ಸೆಲ್ಫಿ ಕ್ಯಾಮೆರಾ ಕುರಿತು ಅಧಿಕೃತ ಮಾಹಿತಿ ದೊರೆತಿಲ್ಲವಾದರೂ, ಇದು 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನು ಮುಖ್ಯವಾಗಿ Tecno POVA 3 ಸ್ಮಾರ್ಟ್‌ಫೋನ್ 33W ವೇಗದ ಚಾರ್ಜಿಂಗ್ ಬೆಂಬಲಿತ 7,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಹಾಗೆಯೇ Z-ಆಕ್ಸಿಸ್ ಲೀನಿಯರ್ ಮೋಟಾರ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು ಸಹ ಸ್ಮಾರ್ಟ್‌ಫೋನಿನಲ್ಲಿ ಸೇರಿಕೊಂಡಿವೆ.
Tecno Pova 3 That Will Be Launched In India On June 15 2022.
30-07-26 10:28 am
HK News Staffer
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
30-07-26 12:18 pm
HK News Staffer
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm