ಬ್ರೇಕಿಂಗ್ ನ್ಯೂಸ್
27-01-23 08:54 pm Source: Vijayakarnataka ಡಿಜಿಟಲ್ ಟೆಕ್
Infinix Note 12i ಸ್ಮಾರ್ಟ್‌ಫೋನ್ ವೈಶಿಷ್ಟ್ಯಗಳು
ನೂತನ Infinix Note 12i 6.7-ಇಂಚಿನ AMOLED FullHD+ ಡಿಸ್‌ಪ್ಲೇ ಹೊಂದಿದ್ದು, ಇದು 1000 nits ಗರಿಷ್ಠ ಬ್ರೈಟ್‌ನೆಸ್, 180Hz ಟಚ್ ಸ್ಲಾಪಿಂಗ್ ರೇಡ್ ಸಾಮರ್ಥ್ಯಗಳ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ನಿಂದ ರಕ್ಷಿಸಲ್ಪಟ್ಟಿದೆ. ಹುಡ್ ಅಡಿಯಲ್ಲಿ, 4GB RAM ಮತ್ತು 64GB ಸ್ಟೋರೇಜ್ ಜೊತೆಗೆ ಜೋಡಿಸಲಾಗಿರುವ MediaTek Helio G85 ಚಿಪ್‌ಸೆಟ್‌ನಿಂದ ಚಾಲಿತವಾಗಿರುವ ಈ ಸ್ಮಾರ್ಟ್‌ಫೋನ್ Android 12 ಅನ್ನು ಆಧರಿಸಿ XOS 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇಷ್ಟೇ ಅಲ್ಲದೇ, ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಹೊಂದಿರುವ ಈ ಸ್ಮಾರ್ಟ್‌ಫೋನ್ 7GB ವರೆಗೆ RAM ವಿಸ್ತರಿಸಿಕೊಳ್ಳಬಹುದಾದ RAM ಪ್ಲಸ್ ವೈಶಿಷ್ಟ್ಯವನ್ನು ಹೊಂದಿದೆ.
ಕ್ಯಾಮೆರಾ ವಿಭಾಗದಲ್ಲಿ, Infinix Note 12i ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದು 50MP ಪ್ರಾಥಮಿಕ ಕ್ಯಾಮೆರಾ, 2MP ಡೆಪ್ತ್ ಸೆನ್ಸಾರ್ ಮತ್ತು QVGA ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಮುಂಭಾಗದಲ್ಲಿ ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ 8MP ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ. ಬೆಳಕಿನ ಪರಿಸ್ಥಿತಿಗಳು ಹೇಗೇ ಇದ್ದರೂ ಸೆಲ್ಫಿಗಳನ್ನು ತೆಗೆದುಕೊಳ್ಳಲು ಈ ಸ್ಮಾರ್ಟ್‌ಫೋನ್ ಸೂಕ್ತವಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನುಳಿದಂತೆ, 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿ, 4G, Wi-Fi, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹಾಗೂ DTS ಸರೌಂಡ್ ಸ್ಪೀಕರ್‌ಗಳನ್ನು ಹೊಂದಿದೆ.
Infinix Note 12i ಸ್ಮಾರ್ಟ್‌ಫೋನ್ ಬೆಲೆ ಎಷ್ಟು?
ಭಾರತದಲ್ಲಿ ನೂತನ Infinix Note 12i ಸ್ಮಾರ್ಟ್‌ಫೋನ್ ಕೇವಲ 9,999 ರೂ. ಬೆಲೆಯಲ್ಲಿ ಏಕೈಕ ಮಾದರಿಯಲ್ಲಿ ಬಿಡುಗಡೆಯಾಗಿದೆ. ಫೋರ್ಸ್ ಬ್ಲಾಕ್ ಮತ್ತು ಮೆಟಾವರ್ಸ್ ಬ್ಲೂ ಎರಡು ಬಣ್ಣದ ಆಯ್ಕೆಗಳಲ್ಲಿ ಪರಿಚಯಿಸಲಾಗಿರುವ ಈ ಸ್ಮಾರ್ಟ್‌ಫೋನ್ ಇದೇ ಜನವರಿ 30 ರಂದು ಫ್ಲಿಪ್‌ಕಾರ್ಟ್ ಮೂಲಕ ಮಾರಾಟಕ್ಕೆ ಬರಲಿದ್ದು, ಲಾಂಚ್ ಆಫರ್ ಪ್ರಯುಕ್ತ ಗ್ರಾಹಕರು ಸ್ಮಾರ್ಟ್‌ಫೋನ್ ಖರೀದಿಸಿದ 30 ದಿನಗಳಲ್ಲಿ ಜಿಯೋ ಗ್ರಾಹಕರು 1,000 ಕ್ಯಾಶ್‌ಬ್ಯಾಕ್ ಪಡೆಯಬಹುದು. ಆದರೆ, ನೆನಪಿಡಿ. ನೀವು ಫೋನ್‌ನಲ್ಲಿ ಜಿಯೋ ಸಿಮ್ ಹಾಕಿದರೆ ನಿಮಗೆ 1,000 ರೂಪಾಯಿ ಕ್ಯಾಶ್‌ಬ್ಯಾಕ್ ಸಿಗುತ್ತದೆ. ಆದರೆ, ಒಮ್ಮೆ ಕ್ಯಾಶ್‌ಬ್ಯಾಕ್ ಸ್ವೀಕರಿಸಿದ ನಂತರ, ಫೋನ್ 30 ತಿಂಗಳವರೆಗೆ ಜಿಯೋ ನೆಟ್‌ವರ್ಕ್‌ಗೆ ಲಾಕ್ ಆಗುತ್ತದೆ, ಆದ್ದರಿಂದ ನೀವು ಇನ್ನೊಂದು ನೆಟ್‌ವರ್ಕ್‌ಗೆ ಬದಲಾಯಿಸಲು ಸಾಧ್ಯವಾಗುವುದಿಲ್ಲ.
Infinix Note 12i Launched With Rs 1000 Cashback On Jio Check Details.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am