ಬ್ರೇಕಿಂಗ್ ನ್ಯೂಸ್
09-03-23 07:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಕಳೆದ ವರ್ಷ ಭರ್ಜರಿ ಸದ್ದು ಮಾಡಿದ್ದ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ Moto G82 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ದೇಶದ ಮೊಬೈಲ್ ಮಾರುಕಟ್ಟೆಗೆ ವಿನೂತನ ಸ್ಮಾರ್ಟ್‌ಫೋನ್‌ಗಳ ಆಗಮನವಾಗುತ್ತಿರುವ ಸಮಯದಲ್ಲಿ ಮೊಟೊರೊಲಾ ಕಂಪೆನಿ ತನ್ನ ಜನಪ್ರಿಯ Moto G82 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ 1500 ರೂ. ಇಳಿಕೆ ಮಾಡಿದ್ದು, ಈ ಮೊದಲು ದೇಶದಲ್ಲಿ Moto G82 5G ಸ್ಮಾರ್ಟ್‌ಫೋನಿನ ಬೇಸ್ 6GB RAM + 128GB ಸ್ಟೋರೇಜ್ ಮಾದರಿಯು 21,499 ರೂ.ಗಳಿಗೆ ಹಾಗೂ 8GB + 128GB ಸಾಮರ್ಥ್ಯದ ಫೋನ್ 22,999 ರೂ.ಗಳಿಗೆ ಖರೀದಿಗೆ ಲಭ್ಯವಿದ್ದವು. ಇದೀಗ ಬೆಲೆ ಇಳಿಕೆಯ ನಂತರ ಈ ಎರಡು ಮಾದರಿ ಸ್ಮಾರ್ಟ್‌ಫೋನ್‌ಗಳು ಕ್ರಮವಾಗಿ 19,999 ರೂ. ಮತ್ತು 21,499 ರೂ. ಹೊಸ ಬೆಲೆಯಲ್ಲಿ ಮಾರಾಟಕ್ಕೆ ಬಂದಿವೆ.
ಮಧ್ಯಮ ಬೆಲೆ ಶ್ರೇಣಿಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್ ಒಂದನ್ನು ಹುಡುಕುತ್ತಿರುವ ಗ್ರಾಹಕರನ್ನು ಗುರಿಯಾಗಿಸಿಕೊಂಡು ಕಳೆದ ವರ್ಷ Moto G82 5G ಸ್ಮಾರ್ಟ್‌ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿತ್ತು. ಈ Moto G82 5G ಸ್ಮಾರ್ಟ್‌ಫೋನ್ 120Hz AMOLED ಡಿಸ್‌ಪ್ಲೇ, ಟ್ರಿಪಲ್ ರಿಯರ್ ಕ್ಯಾಮೆರಾ ಮತ್ತು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ನಂತಹ ವೈಶಿಷ್ಟ್ಯಗಳನ್ನು ಹೊತ್ತು ದೇಶದ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್ ಪ್ರಿಯರ ಗಮನಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಬೆಲೆ ಇಳಿಕೆಯ ನಂತರ ಹಲವು ಬ್ಯಾಂಕ್ ಕೊಡುಗೆಗಳು ಮತ್ತು ಎಕ್ಸ್‌ಚೇಂಜ್ ಆಫರ್ ಮೂಲಕ ಮತ್ತೆ ಗ್ರಾಹಕರ ಮನಸೂರೆಗೊಳಿಸಲು ತಯಾರಾಗಿದೆ. ಹಾಗಾದರೆ, Moto G82 5G ಸ್ಮಾರ್ಟ್‌ಫೋನ್ ಹೊಂದಿರುವ ವೈಶಿಷ್ಟ್ಯಗಳು ಯಾವುದು ಎಂಬುದನ್ನು ತಿಳಿಯೋಣ ಬನ್ನಿ.
Moto G82 5G ಸ್ಮಾರ್ಟ್‌ಫೋನ್ ವೈಶಿಷ್ಟ್ಯಗಳು
Moto G82 5G ಸ್ಮಾರ್ಟ್‌ಫೋನಿನಲ್ಲಿ 20:9 ಆಕಾರ ಅನುಪಾತದಲ್ಲಿ 6.6-ಇಂಚಿನ ಫುಲ್-HD+ (1,080x2,400 ಪಿಕ್ಸೆಲ್‌ಗಳು) AMOLED ಡಿಸ್‌ಪ್ಲೆ ಅಳವಡಿಸಲಾಗಿದೆ. ಗೇಮಿಂಗ್ ಮತ್ತು ಸ್ಮೂತ್ ಕಾರ್ಯನಿರ್ವಹಣೆಗಾಗಿ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಬೆಂಬಲವನ್ನು ಸಹ ಹೊಂದಿದೆ. ಹುಡ್ ಅಡಿಯಲ್ಲಿ, ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಅನ್ನು ಹೊಂದಿರುವ Moto G82 5G ಸ್ಮಾರ್ಟ್‌ಫೋನ್ 8GB LPDDR4X RAM ಮತ್ತು 128GB ಆನ್‌ಬೋರ್ಡ್ UFS ಸಂಗ್ರಹಣೆಯೊಂದಿಗೆ ಜೋಡಿಯಾಗಿದೆ ಮತ್ತು SD ಕಾರ್ಡ್ ಮೂಲಕ ಸ್ಮಾರ್ಟ್‌ಫೋನಿನ ಮೆಮೊರಿಯನ್ನು 1TB ವರೆಗೆ ವಿಸ್ತರಣೆಯನ್ನು ಬೆಂಬಲಿಸಲಿದೆ. ಇನ್ನು Dolby Atmos ಬೆಂಬಲದಿಂದ ಬೆಂಬಲಿತವಾಗಿರುವ Moto G82 5G ಸ್ಮಾರ್ಟ್‌ಫೋನ್ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿರುವುದನ್ನು ನೋಡಬಹುದು.
ಕ್ಯಾಮೆರಾ ವಿಭಾಗದಲ್ಲಿ, Moto G82 5G ಸ್ಮಾರ್ಟ್‌ಪೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುವ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು f/1.8 ಲೆನ್ಸ್‌ನೊಂದಿಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ, 8-ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಲೆನ್ಸ್‌ಗಳ ಹೊಂದಿದೆ. ಸೆಲ್ಫಿಗಳು ಮತ್ತು ವೀಡಿಯೊಗಳಿಗಾಗಿ, ಮುಂಭಾಗದಲ್ಲಿ f/2.2 ಲೆನ್ಸ್ ಜೊತೆಗೆ 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, USB ಟೈಪ್-C, ಮತ್ತು ವಿಶೇಷವಾಗಿ 3.5mm ಹೆಡ್‌ಫೋನ್ ಜ್ಯಾಕ್ ವೈಶಿಷ್ಟ್ಯಗಳ ಜೊತೆಗೆ ಈ ಸ್ಮಾರ್ಟ್‌ಫೋನ್ 30W TurboPower ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿ ಹೊಂದಿದೆ.
moto g82 5g price in india now starts from rs 19,999.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 02:31 pm
Mangaluru Correspondent
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm