ಬ್ರೇಕಿಂಗ್ ನ್ಯೂಸ್
20-05-23 06:48 pm Source: Gizbot ಡಿಜಿಟಲ್ ಟೆಕ್
ವಿವೋ ಕಂಪೆನಿ ಕ್ಯಾಮೆರಾ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎನಿಸಿಕೊಂಡಿದೆ. ತನ್ನ ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಫೋನ್‌ಗಳಿಂದ ಎಲ್ಲರ ಗಮನಸೆಳೆದಿದೆ. ಇದೀಗ ತನ್ನ ಹೊಸ ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಕೆಲವೇ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡೋದು ಪಕ್ಕಾ ಆಗಿದೆ.
ಹೌದು, ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಲು ತಯಾರಿ ನಡೆಸಿದೆ. ಇದೇ ಸಮಯದಲ್ಲಿ ಈ ಸ್ಮಾರ್ಟ್‌ಫೋನ್ ಫೀಚರ್ಸ್ ಏನಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಫೀಚರ್ಸ್ ಏನಿರಬಹುದು?
ವಿವೋ V29 ಲೈಟ್ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಜೊತೆಗೆ ಡಿಸ್‌ಪ್ಲೇ 20:9 ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿರುವ ನಿರೀಕ್ಷೆಯಿದೆ. ಅಲ್ಲದೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ವರದಿಯಾಗಿದೆ.
ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಕ್ಯಾಮೆರಾ ನಿರೀಕ್ಷೆ ಏನು? ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾದೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ.
ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಬ್ಯಾಟರಿ ಸೆಟ್‌ಅಪ್
ವಿವೋ V29 ಲೈಟ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹೈಬ್ರಿಡ್ ಎಸ್‌ಡಿ ಕಾರ್ಡ್ ಸ್ಲಾಟ್, ಬ್ಲೂಟೂತ್ 5.1 ಮತ್ತು ವೈಫೈ ಹೊಂದಾಣಿಕೆ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಬೆಂಬಲಿಸಲಿದೆ.
ವಿವೋ V29 ಲೈಟ್ ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ ವಿವೋ V29 ಲೈಟ್
ಸ್ಮಾರ್ಟ್‌ಫೋನ್ ಬೆಲೆ ಹಾಗೂ ಲಭ್ಯತೆಯ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಫೋನ್ ಗೋಲ್ಡ್, ಬ್ಲೂ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ಊಹಿಸಲಾಗಿದೆ.
ಇದಲ್ಲದೆ ವಿವೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ವಿವೋ X80 ಸ್ಮಾರ್ಟ್‌ಫೋನ್ ಸರಣಿ ಪರಿಚಯಿಸಿದೆ. ಈ ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳು ಸುಧಾರಿತ ಇಮೇಜಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ಇದನ್ನು ಝೈಸ್ ಸಹ-ಇಂಜಿನಿಯರಿಂಗ್ ಮಾಡಲಾಗಿದೆ. ಇದಲ್ಲದೆ ಲೋ ಲೈಟ್ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿಗಾಗಿ AI ವೀಡಿಯೊ ವರ್ಧನೆಯನ್ನು ಸೇರಿಸುವ ವಿವೋ V1+ ಇಮೇಜಿಂಗ್ ಚಿಪ್ ಅನ್ನು ಕೂಡ ಹೊಂದಿದೆ.
vivo v29 lite specifications reveal details.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm