ಬ್ರೇಕಿಂಗ್ ನ್ಯೂಸ್
25-05-23 06:50 pm Source: Gizbot ಡಿಜಿಟಲ್ ಟೆಕ್
ಶಿಯೋಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಮೊಬೈಲ್ ವಲಯದಲ್ಲಿ ಟ್ರೆಂಡ್ ಸೆಟ್ಟರ್ ಅಂತಾನೇ ಹೆಸರುವಾಸಿ. ಪ್ರತಿ ಭಾರಿಯು ನ್ಯೂ ಡಿಸೈನ್‌ನಲ್ಲಿ ಎಂಟ್ರಿ ನೀಡುವ ಶಿಯೋಮಿ ಸ್ಮಾರ್ಟ್‌ಫೋನ್‌ಗಳ ಮೇಲೆ ಎಲ್ಲರಿಗೂ ಎಲ್ಲಿಲ್ಲದ ಕುತೂಹಲವಿರಲಿದೆ. ಇದೀಗ ಶಿಯೋಮಿ Civi 3 ಸ್ಮಾರ್ಟ್‌ಫೋನ್ ಎಂಟ್ರಿ ನೀಡಿದ್ದು, ಹೊಸ ಸಂಚಲನ ಕ್ರಿಯೆಟ್ ಮಾಡಿದೆ.
ಹೌದು, ಶಿಯೋಮಿ Civi 3 ಸ್ಮಾರ್ಟ್‌ಫೋನ್ ಟೆಕ್ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಫ್ರಂಟ್ ಕ್ಯಾಮೆರಾ ಸಿಸ್ಟಂನಿಂದಾಗಿ ಇಡೀ ಮೊಬೈಲ್ ಮಾರುಕಟ್ಟೆಯನ್ನೇ ದಂಗಾಗುವಂತೆ ಮಾಡಿದೆ. ಇದರ ಡಿಸೈನ್ ಹಾಗೂ ಸ್ಟೈಲಿಶ್ ಲುಕ್ ಇದೀಗ ಟ್ರೆಂಡ್ ಸೃಷ್ಟಿಸಿದೆ. ಹಾಗಾದ್ರೆ ಶಿಯೋಮಿ Civi 3 ಸ್ಮಾರ್ಟ್‌ಫೋನ್ ಡಿಸೈನ್ ಹಾಗೂ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ Civi 3 ಡಿಸ್‌ಪ್ಲೇ ರಚನೆ: ಶಿಯೋಮಿ Civi 3 ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 240Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ 1500 ಗರಿಷ್ಟ ಬ್ರೈಟ್‌ನೆಸ್ ಅನ್ನು ನೀಡಲಿದ್ದು, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.
ಶಿಯೋಮಿ Civi 3 ಪ್ರೊಸೆಸರ್ ಯಾವುದು: ಶಿಯೋಮಿ Civi 3 ಸ್ಮಾರ್ಟ್‌ಫೋನ್ 4nm ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 5G SoC ಪ್ರೊಸೆಸರ್ ಹೊಂದಿದೆ. ಇದಕ್ಕೆ ಪುರಕವಾಗಿ ಮಾಲಿ-G610 GPU ಸಪೋರ್ಟ್ ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಶಿಯೋಮಿ Civi 3 ಕ್ಯಾಮೆರಾ ಸೆಟ್‌ಅಪ್: ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX800 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರಲ್ಲಿ 32 ಮೆಗಾಪಿಕ್ಸೆಲ್ ಆಟೋಫೋಕಸ್ ಲೆನ್ಸ್ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಕ್ಯಾಮೆರಾವನ್ನು ನೀಡಲಾಗಿದೆ.
ಶಿಯೋಮಿ Civi 3 ಬ್ಯಾಟರಿ ಬ್ಯಾಕ್‌ಅಪ್: ಶಿಯೋಮಿ Civi 3 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, NFC, Wi-Fi 6, ಬ್ಲೂಟೂತ್ v5.3 ಮತ್ತು GPS ಸಂಪರ್ಕವನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.

ಶಿಯೋಮಿ Civi 3 ಬೆಲೆ ಮತ್ತು ಲಭ್ಯತೆ: ಪ್ರಸ್ತುತ ಚೀನಾದಲ್ಲಿ ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 12GB + 256GB ಆಯ್ಕೆಯು CNY 2,499 (ಅಂದಾಜು 29,300ರೂ)ಬೆಲೆ ಹೊಂದಿದೆ. ಇದರ 12GB + 512GB ಆಯ್ಕೆಯು CNY 2,699 (ಅಂದಾಜು 31,600ರೂ)ಬೆಲೆ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಅಡ್ವೆಂಚರ್ ಗೋಲ್ಡ್, ಕೊಕೊನಟ್ ಗ್ರೇ, ಮಿಂಟ್ ಗ್ರೀನ್ ಮತ್ತು ರೋಸ್ ಪರ್ಪಲ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಭಾರತಕ್ಕೆ ಎಂಟ್ರಿ ನೀಡುವ ಕುರಿತು ಯಾವುದೇ ಸುದ್ದಿ ಲಭ್ಯವಿಲ್ಲ.
xiaomi civi 3 with 32 megapixel dual front camera launched.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm