ಬ್ರೇಕಿಂಗ್ ನ್ಯೂಸ್
29-05-23 07:27 pm Source: Gizbot ಡಿಜಿಟಲ್ ಟೆಕ್
ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಕೆಲವೇ ಕೆಲ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ಒನ್‌ಪ್ಲಸ್ ಸಂಸ್ಥೆ ಕೂಡ ಮುಂಚೂಣಿಯಲ್ಲಿದೆ. ಒನ್‌ಪ್ಲಸ್ ಸಂಸ್ಥೆ ತನ್ನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೂಲಕ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿಯನ್ನು ಲಾಂಚ್ ಮಾಡಿದೆ.
ಹೌದು, ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಭಾರತಕ್ಕೆ ಮಾತ್ರ ಸೀಮಿತವಾಗಿದ್ದು, ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಈ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 11 ರ ವಿಶೇಷ ಆವೃತ್ತಿಯಾಗಿದ್ದು, ಸೀಮಿತ ಅವಧಿಗೆ ಮಾತ್ರ ಲಭ್ಯವಾಗಲಿದೆ. ಹಾಗಾದ್ರೆ ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿಯ ವಿಶೇಷತೆ ಏನು ಅನ್ನೊದನ್ನ ಈ ಲೆಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ವಿಶೇಷತೆ: ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಸ್ಮಾರ್ಟ್‌ಫೋನ್ 6.7 ಇಂಚಿನ QHD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು HDR10+ ಬೆಂಬಲವನ್ನು ಹೊಂದಿದ್ದು, 1300ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಪ್ರೊಸೆಸರ್:
ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಜೊತೆಗೆ ಆಕ್ಸಿಜನ್OS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಕ್ಯಾಮೆರಾ: ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೋನಿ IMX890 ಸೆನ್ಸಾರ್, ಎರಡನೇ ಕ್ಯಾಮೆರಾ 48MP ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 32MP ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16MP ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಬ್ಯಾಟರಿ: ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಡಿವೈಸ್ ಇತ್ತೀಚೆಗೆ OxygenOS 13.1 ನವೀಕರಣವನ್ನು ಸ್ವೀಕರಿಸಿದೆ.
ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಬೆಲೆ ಮತ್ತು ಲಭ್ಯತೆ: ಒನ್‌ಪ್ಲಸ್ 11 ಮಾರ್ಬಲ್ ಒಡಿಸ್ಸಿ ಆವೃತ್ತಿ ಸ್ಮಾರ್ಟ್‌ಫೋನ್ 16GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 64,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಇದೇ ಜೂನ್ 6 ರಿಂದ ಒನ್‌ಪ್ಲಸ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.
ಇದಲ್ಲದೆ ಒನ್‌ಪ್ಲಸ್ ಸಂಸ್ಥೆ ಇತ್ತೀಚಿಗೆ ಒನ್‌ಪ್ಲಸ್ 11R 5G ಅನ್ನು ಸಹ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.74 ಇಂಚಿನ 10 ಬಿಟ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 120Hz ರಿಫ್ರೆಶ್ ರೇಟ್ ಹಾಗೂ 360 Hz ಟಚ್ ಸ್ಯಾಂಪ್ಲಿಂಗ್ ರೇಟ್ ಜೊತೆಗೆ 2772 X 1240 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 ಪ್ಲಸ್ ಜನ್ 1 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಈ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸುವ ಮೊದಲ ಫೋನ್ ಆಗಿ ಗುರುತಿಸಿಕೊಂಡಿದೆ.
oneplus 11 5g marble odyssey edition smartphone launched in india.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 01:58 pm
Mangalore Correspondent
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm