ಬ್ರೇಕಿಂಗ್ ನ್ಯೂಸ್
19-07-23 09:48 pm Source: Gizbot ಡಿಜಿಟಲ್ ಟೆಕ್
ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಮೂಲಕ ತನ್ನ C ಸರಣಿಯಲ್ಲಿ ಹೊಸ ಬಜೆಟ್ ಸ್ಮಾರ್ಟ್‌ಫೋನ್ ಅನಾವರಣಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 108MP ಸೆನ್ಸಾರ್ ಪಡೆದುಕೊಂಡಿದೆ.
ಹೌದು, ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಯುನಿಸೋಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ರಿಯಲ್‌ಮಿ C53 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ:
ರಿಯಲ್‌ಮಿ C53 ಸ್ಮಾರ್ಟ್‌ಫೋನ್ 6.74 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 90.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.
ರಿಯಲ್‌ಮಿ C53 ಪ್ರೊಸೆಸರ್ ಯಾವುದು?:
ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಯುನಿಸೋಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ Realme UI T ಆವೃತ್ತಿಯನ್ನು ಬೆಂಬಲಿಸಲಿದೆ. ಹಾಗೆಯೇ 4GB RAM + 128GB ಮತ್ತು 6GB RAM + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 12GB ವರೆಗೆ ವಿಸ್ತರಿಸಬಹುದಾಗಿದೆ. ಜೊತೆಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ರಿಯಲ್‌ಮಿ C53 ಕ್ಯಾಮೆರಾ ಸೆಟ್‌ಅಪ್:
ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾಗಳಿಗಾಗಿ ಹಿಂಭಾಗದಲ್ಲಿ ಮೂರು ಪ್ರತ್ಯೇಕ ವೃತ್ತಾಕಾರದ ದ್ವೀಪಗಳು ಮತ್ತು ಎಲ್ಇಡಿ ಫ್ಲ್ಯಾಷ್‌ಲೈಟ್ ಅನ್ನು ಹೊಂದಿದೆ.
ರಿಯಲ್‌ಮಿ C53 ಬ್ಯಾಟರಿ ಮತ್ತು ಇತರೆ ಸೌಲಭ್ಯ:
ರಿಯಲ್‌ಮಿ C53 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, GPS/AGPS, Wi-Fi, ಬ್ಲೂಟೂತ್ 5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸಾರ್, ಗೈರೊ ಮೀಟರ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
ರಿಯಲ್‌ಮಿ C53 ಬೆಲೆ ಮತ್ತು ಲಭ್ಯತೆ:
ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಭಾರತದಲ್ಲಿ ತನ್ನ ಬೇಸ್ ಮಾಡೆಲ್ 4GB RAM + 128GB ಸ್ಟೋರೇಜ್ ಆಯ್ಕೆಗೆ 9,999ರೂ.ಬೆಲೆಯನ್ನು ಹೊಂದಿದೆ. ಇದರ 6GB RAM + 64GB ಸ್ಟೋರೇಜ್ ಆಯ್ಕೆಗೆ 10,999ರೂ.ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಚಾಂಪಿಯನ್ ಗೋಲ್ಡನ್ ಮತ್ತು ಚಾಂಪಿಯನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಜುಲೈ 26 ರಂದು ರಿಯಲ್‌ಮಿ.ಕಾಮ್ ಮತ್ತು ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.
ಲಾಂಚ್ ಆಫರ್ ಏನಿದೆ?:
ರಿಯಲ್‌ಮಿ C53 ಸ್ಮಾರ್ಟ್‌ಫೋನ್ ಇಂದು ಸಂಜೆ 6:00 ರಿಂದ 8:00 ಗಂಟೆಯ ತನಕ ಅರ್ಲಿ ಬರ್ಡ್ ಸೇಲ್ ನಡೆಸುತ್ತಿದೆ. ಈ ಸೇಲ್ ಪ್ರಯುಕ್ತ ICICI, SBI ಮತ್ತು HDFC ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿಕೊಂಡು ಮೊಬೈಲ್ ಖರೀದಿಸುವ ಗ್ರಾಹಕರಿಗೆ 500ರೂ. ರಿಯಾಯಿತಿ ಸಿಗಲಿದೆ.
Realme c53 with 5000mah battery launched in India price and specifications details in Kannada.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 01:58 pm
Mangalore Correspondent
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm