ಬ್ರೇಕಿಂಗ್ ನ್ಯೂಸ್
27-07-23 10:33 pm Source: Gizbot Kannada ಡಿಜಿಟಲ್ ಟೆಕ್
ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆಯು ಜನಪ್ರಿಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದು, ಹಲವು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ Y ಸರಣಿಯಲ್ಲಿನ ವಿವೋ ವಿವೋ Y100 5G ಸ್ಮಾರ್ಟ್‌ಫೋನ್ ಗ್ರಾಹಕರ ಗಮನ ಸೆಳೆದಿದ್ದು, ಇದೀಗ ಭರ್ಜರಿ ಬೆಲೆ ಇಳಿಕೆಯಿಂದಾಗಿ ಮತ್ತೆ ಗ್ರಾಹಕರು ತಿರುಗಿ ನೋಡುವಂತೆ ಮಾಡಿದೆ.
ಹೌದು, ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ನಲ್ಲಿ ವಿವೋ Y100 5G ಸ್ಮಾರ್ಟ್‌ಫೋನ್ 20% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. 8GB RAM + 128GB ವೇರಿಯಂಟ್ ಫೋನ್ ಬೆಲೆ 29,999ರೂ. ಇದ್ದು, ಈಗ 23,999ರೂ. ಗಳ ಆಫರ್ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ದೊರೆಯುತ್ತದೆ.

ಇನ್ನು ವಿವೋ Y100 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು, 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ ಇನ್ನು ಈ ಫೋನ್ ಪೆಸಿಫಿಕ್ ಬ್ಲೂ ಮತ್ತು ಟ್ವಿಲೈಟ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೇ ವಿವೋ Y100 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ Y100 5G ಡಿಸ್‌ಪ್ಲೇ ರಚನೆ ಹೇಗಿದೆ : ವಿವೋ Y100 5G ಮೊಬೈಲ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಸ್ಕ್ರೀನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 360Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು,1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.

ವಿವೋ Y100 5G ಪ್ರೊಸೆಸರ್ ಪವರ್ ಯಾವುದು : ವಿವೋ Y100 5G ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಅನ್ನು ಒಳಗೊಂದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 128GB ಆಂತರೀಕ ಸ್ಟೋರೇಜ್ ಅನ್ನು ಸಪೋರ್ಟ್ ಮಾಡಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ವಿವೋ Y100 5G ಕ್ಯಾಮೆರಾ ರಚನೆ ಎಷ್ಟಿದೆ : ವಿವೋ Y100 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಪಡೆದಿದೆ.

ವಿವೋ Y100 5G ಬ್ಯಾಟರಿ ಬ್ಯಾಕ್‌ಅಪ್ ಎಷ್ಟು : ವಿವೋ Y100 5G ಮೊಬೈಲ್ 44W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ಡ್ಯುಯಲ್-ಬ್ಯಾಂಡ್ ವೈಫೈ, ಬ್ಲೂಟೂತ್ 5.2, ಯುಎಸ್‌ಬಿ ಟೈಪ್-ಸಿ, ಜಿಪಿಎಸ್ ಮತ್ತು ಒಟಿಜಿಯನ್ನು ಬೆಂಬಲಿಸಲಿದೆ. ಜೊತೆಗೆ ಹೈ-ರೆಸ್ ಆಡಿಯೊ ಪ್ರಮಾಣೀಕರಣದೊಂದಿಗೆ 3.5mm ಆಡಿಯೊ ಜ್ಯಾಕ್ ಅನ್ನು ಸಪೋರ್ಟ್ ಮಾಡುತ್ತದೆ.
ಭಾರತದಲ್ಲಿ ವಿವೋ Y100 5G ಮೆಮೊರಿ ಹಾಗೂ ಲಭ್ಯತೆ : ವಿವೋ Y100 5G ಮೊಬೈಲ್ ಭಾರತದಲ್ಲಿ 8GB + 128GB ಸ್ಟೋರೇಜ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪೆಸಿಫಿಕ್ ಬ್ಲೂ ಮತ್ತು ಟ್ವಿಲೈಟ್ ಗೋಲ್ಡ್ ಬಣ್ಣದ ಆಯ್ಕೆ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಅಮೆಜಾನ್ ತಾಣದಲ್ಲಿ ಖರೀದಿಸಬಹುದು.
vivo y100 5g big price cut on amazon website.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm