ಬ್ರೇಕಿಂಗ್ ನ್ಯೂಸ್
31-07-23 09:30 pm Source: Gizbot Kannada ಡಿಜಿಟಲ್ ಟೆಕ್
ಮೊಬೈಲ್ ಮಾರುಕಟ್ಟೆಯಲ್ಲಿ ನೋಕಿಯಾ ಕಂಪನಿಯು ಇಂದಿಗೂ ತನ್ನ ಜನಪ್ರಿಯತೆ ಉಳಿಸಿಕೊಂಡಿದೆ. ಸಂಸ್ಥೆಯ ಕೆಲವು ಅಂಡ್ರಾಯ್ಡ್ ಫೋನ್‌ಗಳು ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಆ ಪೈಕಿ ಅಗ್ಗದ ಬೆಲೆಯಲ್ಲಿ ನೋಕಿಯಾ C12 ಪ್ರೊ ಮೊಬೈಲ್ ಗ್ರಾಹಕರ ಗಮನ ಆಕರ್ಷಿಸಿದೆ. ಹಾಗೆಯೇ ಈಗ ಬೆಲೆ ಇಳಿಕೆ ಪಡೆದು ಮತ್ತಷ್ಟು ಗ್ರಾಹಕರ ಅನ್ನು ಸೆಳೆದಿದೆ.
ಹೌದು, ನೋಕಿಯಾ ಸಂಸ್ಥೆಯ ಎಂಟ್ರ ಲೆವೆಲ್ ಮಾದರಿಯ ನೋಕಿಯಾ C12 ಪ್ರೊ ಮೊಬೈಲ್ ಅಮೆಜಾನ್ ಇ ಕಾಮರ್ಸ್ ನಲ್ಲಿ ಈಗ 21% ರಷ್ಟು ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB RAM, 4GB RAM + 2GB ವರ್ಚುವಲ್ RAM ಸ್ಟೋರೇಜ್‌ನ ವೇರಿಯಂಟ್ ಬೆಲೆಯು 9,199ರೂ. ಆಗಿದ್ದು, ಆದ್ರೆ, ಆಫರ್‌ನಲ್ಲಿ ಗ್ರಾಹಕರು ಈ ಫೋನ್ ಅನ್ನು 7,299 ರೂ. ಗಳ ಸ್ಪೆಷಲ್ ದರದಲ್ಲಿ ಖರೀದಿ ಮಾಡಬಹುದಾಗಿದೆ.

ಎಂಟ್ರ ಲೆವೆಲ್ ಮಾದರಿ ಈ ನೋಕಿಯಾ C12 ಪ್ರೊ ಮೊಬೈಲ್ ಆಕ್ಟಾ ಕೋರ್ Unisoc SC9863A1 ಪ್ರೊಸೆಸರ್ ಪವರ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಅಲ್ಲದೇ ಈ ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 10W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯ ಸಪೋರ್ಟ್ ಪಡೆದಿದೆ. ಇನ್ನುಳಿದಂತೆ ನೋಕಿಯಾ C12 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ನೋಕಿಯಾ C12 ಪ್ರೊ ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ ಮಾಹಿತಿ : ನೋಕಿಯಾ C12 ಪ್ರೊ ಮೊಬೈಲ್ 6.3 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಪಡೆದಿದ್ದು, 20:9 ರ ಆಕಾರ ಅನುಪಾತವನ್ನು ಇದು ಹೊಂದಿದೆ. ಹಾಗೆಯೇ ಈ ಫೋನ್ 720 × 1600 ಪಿಕ್ಸೆಲ್‌ಗಳ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದಿರುವ ಜೊತೆಗೆ ಈ ಡಿಸ್‌ಪ್ಲೇಯು 20:9 ಅನುಪಾತ ಅನ್ನು ಹೊಂದಿದ್ದು, ಜೊತೆಗೆ ಈ ಫೋನ್ 2D ಗ್ಲಾಸ್ ರಕ್ಷಣೆ ಸೌಲಭ್ಯ ಸಹ ಪಡೆದಿದೆ.

ನೋಕಿಯಾ C12 ಪ್ರೊ ಪ್ರೊಸೆಸರ್ ಕಾರ್ಯ ವೈಖರಿ ಮಾಹಿತಿ : ನೋಕಿಯಾ C12 ಪ್ರೊ ಮೊಬೈಲ್ ಆಕ್ಟಾ ಕೋರ್ Unisoc SC9863A1 ಪ್ರೊಸೆಸರ್ ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ಗೋ ಓಎಸ್ ಸಪೋರ್ಟ್ ಪಡೆದಿದೆ. ಇದರ ಜೊತೆಗೆ ಈ ಫೋನ್ 2 GB RAM + 64 GB ಮತ್ತು 3 GB RAM + 64 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ನೋಕಿಯಾ C12 ಪ್ರೊ ಕ್ಯಾಮೆರಾ ಸೆನ್ಸಾರ್ ಹೇಗಿದೆ : ನೋಕಿಯಾ C12 ಪ್ರೊ ಮೊಬೈಲ್ ಫೋನ್ ಸಿಂಗಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ಹಾಗೆಯೇ ಮುಂಭಾಗದಲ್ಲಿ 5 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ LED ಫ್ಲ್ಯಾಶ್ ಸೌಲಭ್ಯ ವನ್ನು ಪಡೆದುಕೊಂಡಿದೆ.
ನೋಕಿಯಾ C12 ಪ್ರೊ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಏನು : ನೋಕಿಯಾ C12 ಪ್ರೊ ಮೊಬೈಲ್ ಫೋನ್ 4000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪವರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 10W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ ನೋಕಿಯಾ C12 ಪ್ರೊ ಫೋನ್ IP52 ರೇಟಿಂಗ್ ಸ್ಲ್ಯಾಶ್ ರೆಸಿಸ್ಟೆನ್ಸ್ ಸೌಲಭ್ಯ ಅನ್ನು ಪಡೆದುಕೊಂಡಿದೆ.
ನೋಕಿಯಾ C12 ಪ್ರೊ ಮೆಮೊರಿ ಮತ್ತು ಕಲರ್ ಆಯ್ಕೆ ಮಾಹಿತಿ : ನೋಕಿಯಾ C12 ಪ್ರೊ ಮೊಬೈಲ್ 2 GB RAM + 64 GB ಮತ್ತು 3 GB RAM + 64 GB ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಆಕರ್ಷಕ ಡಿಸೈನ್ ಹೊಂದಿರುವ ಈ ಫೋನ್ ಚಾರ್ಕೋಲ್ ಬ್ಲ್ಯಾಕ್ ಹಾಗೂ ಮಿಂಟ್ ಕಲರ್ ಆಯ್ಕೆ ಪಡೆದಿದೆ. ಇನ್ನು ಗ್ರಾಹಕರು ಈ ಫೋನ್ ಅನ್ನು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಪಡೆಯಬಹುದಾಗಿದೆ.
Nokia c12 pro price drop on amazon platform.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm