ಬ್ರೇಕಿಂಗ್ ನ್ಯೂಸ್
17-08-23 07:30 pm Source: Gizbot Kannada ಡಿಜಿಟಲ್ ಟೆಕ್
ಸ್ಮಾರ್ಟ್‌ಫೋನ್ ವಲಯದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿರುವ ರಿಯಲ್‌ಮಿ 11 5G ಮತ್ತು ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ರಿಯಲ್‌ಮಿ ಕಂಪೆನಿ ಈ ಎರಡು ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಆಗಸ್ಟ್ 23 ರಂದು 12 PM ಗಂಟೆಗೆ ಲಾಂಚ್ ಮಾಡುವುದಾಗಿ ಹೇಳಿದೆ.
ಹೌದು, ರಿಯಲ್‌ಮಿ 11 5G ಮತ್ತು ರಿಯಲ್‌ಮಿ 11X 5G ಆಗಸ್ಟ್ 23 ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳ ವಿವರಗಳು ಈಗಾಗಲೇ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ರಿಯಲ್‌ಮಿ 11 5G 'ಗ್ಲೋರಿ ಹಾಲೋ' ವಿನ್ಯಾಸವನ್ನು ಪ್ರದರ್ಶಿಸುವ ನಿರೀಕ್ಷೆಯಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ನಿರೀಕ್ಷೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ರಿಯಲ್‌ಮಿ 11 5G ಡಿಸ್‌ಪ್ಲೇ ವಿನ್ಯಾಸ ಹೇಗಿರಲಿದೆ?
ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದು 86.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದೆ. ಇದಲ್ಲದೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಜೊತೆಗೆ 550 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ನೀಡಲಿದೆ.
ರಿಯಲ್‌ಮಿ 11 5G ಪ್ರೊಸೆಸರ್ ಯಾವುದು?
ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ವೇಗವನ್ನು ಹೊಂದಿರುವ ನಿರೀಕ್ಷೆಯಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಹಾಗೆಯೇ 8GB + 128GB ಮತ್ತು 8GB + 256GB ರೂಪಾಂತರಗಳಲ್ಲಿ ಬರುವ ನಿರೀಕ್ಷೆಯಿದೆ.
ರಿಯಲ್‌ಮಿ 11 5G ಕ್ಯಾಮೆರಾ ಸೆಟ್‌ಅಪ್
ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.
ರಿಯಲ್‌ಮಿ 11 5G ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ರಿಯಲ್‌ಮಿ 11 5G ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ ಬೆಲೆ ವಿವರ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಗ್ಲೋರಿ ಬ್ಲಾಕ್ ಮತ್ತು ಗ್ಲೋರಿ ಗೋಲ್ಡ್ ಬಣ್ಣ ಆಯ್ಕೆಗಳಲ್ಲಿ ನೀಡಲಾಗುವುದು ಎನ್ನಲಾಗಿದೆ.
ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್ ಫೀಚರ್ಸ್ ನಿರೀಕ್ಷೆ ಏನು?
ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 33W 6GB + 128GB ಮತ್ತು 8GB + 256GB ರೂಪಾಂತರದ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಕೂಡ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಪಡೆದಿರಲಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಹೇಳಲಾಗಿದೆ.
Realme 11 5G and Realme 11x 5G Smartphones India Launch set for August 23.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm