ಬ್ರೇಕಿಂಗ್ ನ್ಯೂಸ್
28-08-23 07:16 pm Source: Gizbot Kannada ಡಿಜಿಟಲ್ ಟೆಕ್
ಟೆಕ್ ವಲಯವೇ ಬಹಳ ಕುತೂಹಲದಿಂದ ಎದುರುನೋಡುತ್ತಿದ್ದ ವಿವೋದ (Vivo) ಹೊಸ ಫೋನ್ ಕೊನೆಗೂ ಲಾಂಚ್ ಆಗಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದುವ ಮೂಲಕ ವಿಶೇಷವಾದ ಸ್ಮಾರ್ಟ್‌ಫೋನ್ ಎನಿಸಿಕೊಂಡಿದ್ದು, ಇದರೊಂದಿಗೆ ಕೆಂಪು ಹಾಗೂ ನೀಲಿ ಬಣ್ಣಗಳಲ್ಲಿ ಜಗಮಗಿಸುತ್ತಿದೆ.
ಹೌದು, ಸ್ಮಾರ್ಟ್‌ಫೋನ್ ವಲಯದಲ್ಲಿ ವಿವೋ ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈ ಕಂಪೆನಿಯ ಫೋನ್‌ಗಳು ಅಗ್ಗದ ದರದಲ್ಲಿ ಅತ್ಯುತ್ತಮ ಫೀಚರ್ಸ್ ನೀಡುವುದಕ್ಕೆ ಹೆಸರಾಗಿದ್ದು, ಈ ಸಾಲಿಗೆ ಈಗ ವಿವೋ V29e (Vivo V29e) ಸ್ಮಾರ್ಟ್‌ಫೋನ್ ಸೇರಿಕೊಂಡಿದೆ. ಈ ಫೋನ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲ ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದೆ. ಹಾಗಿದ್ರೆ, ಇದರ ಪ್ರಮುಖ ಫೀಚರ್ಸ್ ಹಾಗೂ ಭಾರತದಲ್ಲಿ ಈ ಫೋನ್ ಬೆಲೆ ಎಷ್ಟು ಎಂಬ ಮಾಹಿತಿ ಇಲ್ಲಿದೆ ನೋಡಿ.

ವಿವೋ V29e ಅನ್ನು ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಮಾಡಲಾಗಿದ್ದು, ಹಿಂದಿನ ವಿವೋ V-ಸರಣಿ ಫೋನ್‌ಗಳಂತೆಯೇ, ಹೊಸ ವಿವೋ V29e ಅನ್ನು ಫೋಟೋಗ್ರಫಿ ಮತ್ತು ಬಜೆಟ್-ಕೇಂದ್ರಿತ ಗ್ರಾಹಕರಿಗಾಗಿ ವಿನ್ಯಾಸಗೊಳಿಸಲಾಗಿದೆ. ಪ್ರೀಮಿಯಂ ಎಕ್ಸ್-ಸರಣಿಯ ಫೋನ್‌ಗಳಿಗಿಂತ ಭಿನ್ನವಾಗಿ ಕಾಣಿಸಿಕೊಂಡಿರುವ ಈ ಫೋನ್ ಆಟೋ-ಫೋಕಸ್‌ನೊಂದಿಗೆ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.
ವಿವೋ V29e ಡಿಸ್‌ಪ್ಲೇ ವಿವರ: ಈ ಫೋನ್ ಹೆಚ್ಚಿನ ರಿಫ್ರೆಶ್ ರೇಟ್‌ನೊಂದಿಗೆ ಫುಲ್ ಹೆಚ್‌ಡಿ 6.73 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಅಂದರೆ 2400x1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದ್ದು, ಸೆಲ್ಫಿ ಕ್ಯಾಮೆರಾ ಉದ್ದೇಶಕ್ಕಾಗಿ ಮುಂಭಾಗದಲ್ಲಿ ಪಂಚ್ ಕಟೌಟ್ ಆಯ್ಕೆ ನೀಡಲಾಗಿದೆ. ಈ ಸೆಲ್ಫಿ ಕ್ಯಾಮೆರಾ ಆಟೋ ಫೋಕಸ್ ಫೀಚರ್ಸ್ ಪಡೆದಿದೆ.
ವಿವೋ V29e ಪ್ರೊಸೆಸರ್ ಮಾಹಿತಿ: ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನ್ಯಾಪ್ ಡ್ರ್ಯಾಗನ್ 695 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ ಓಎಸ್ ಅನ್ನು ರನ್ ಮಾಡಲಿದೆ. ಜೊತೆಗೆ ಎರಡು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಈ ಫೋನ್ ಕಂಡುಬರುತ್ತದೆ ಅಂದರೆ ಒಂದು 128GB ಮತ್ತೊಂದು 256GB ಸ್ಟೋರೇಜ್. 8GB RAM ಸಂರಚನೆಯು ಎರಡೂ ಮಾದರಿಗಳಲ್ಲಿ ಒಂದೇ ಆಗಿರುತ್ತದೆ.

ವಿವೋ V29e ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಅದರಲ್ಲಿ 64 ಮೆಗಾಪಿಕ್ಸೆಲ್ OIS ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಹೊಂದಿದೆ. ಇದು ಕ್ಯಾಮರಾ ಆಪ್ ಪೋರ್ಟ್ರೇಟ್, ಮೈಕ್ರೋ ಮೂವಿ, ಹೈ-ರೆಸಲ್ಯೂಶನ್, ಪ್ಯಾನೋ, ಸ್ಲೋ ಮೋಷನ್, ಡಬಲ್ ಎಕ್ಸ್‌ಪೋಸರ್, ಡ್ಯುಯಲ್ ವ್ಯೂ, ಸೂಪರ್‌ಮೂನ್ ಮತ್ತು ಲೈಟ್ ಎಫೆಕ್ಟ್‌ಗಳನ್ನು ಒಳಗೊಂಡಂತೆ ಹಲವು ಫೀಚರ್ಸ್ ಪಡೆದಿದೆ. ಸೆಲ್ಫಿಗಾಗಿ ಮೊದಲೇ ತಿಳಿಸಿದಂತೆ ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.
ವಿವೋ V29e ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, 44W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಉಳಿದಂತೆ 5G, ಟೈಪ್ ಟಿ ಚಾರ್ಜಿಂಗ್ ಪೋರ್ಟ್, ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಅನೇಕ ಭದ್ರತಾ ಹಾಗೂ ಕನೆಕ್ಟಿವಿಟಿ ಫೀಚರ್ಸ್ ಆಯ್ಕೆ ಪಡೆದುಕೊಂಡಿದೆ.

ವಿವೋ V29e ಬೆಲೆ ಹಾಗೂ ಲಭ್ಯತೆ: ಈ ಫೋನ್ 128GB ಮತ್ತು 256GB ಸ್ಟೋರೇಜ್‌ನೊಂದಿಗೆ 8GB RAM ನಲ್ಲಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಇದರ ಬೆಲೆ 26,999ರೂ.ಗಳಿಂದ ರಿಂದ ಪ್ರಾರಂಭವಾಗುತ್ತದೆ. ಹಾಗೆಯೇ 28,999ರೂ.ವರೆಗೂ ಇರಲಿದೆ. ಜೊತೆಗೆ ಕೆಂಪು ಅಥವಾ ನೀಲಿ ಬಣ್ಣದಲ್ಲಿ ಈ ಫೋನ್‌ಗಳಿದ್ದು, ಆರ್ಟಿಸ್ಟಿಕ್ ರೆಡ್ ಆಯ್ಕೆಯು ಬಣ್ಣವನ್ನು ಬದಲಾಯಿಸುವ ತಂತ್ರಜ್ಞಾನದೊಂದಿಗೆ ಬರುತ್ತದೆ. ಇದನ್ನು ಫ್ಲಿಪ್‌ಕಾರ್ಟ್ ಮತ್ತು ವಿವೋದ ಅಧಿಕೃತ ಸೈಟ್ ಮೂಲಕ ಖರೀದಿ ಮಾಡಬಹುದಾಗಿದೆ.
Vivo V29e Launch with 50mp Selfie Camera know Specs Price Details.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm