ಬ್ರೇಕಿಂಗ್ ನ್ಯೂಸ್
08-12-20 05:10 pm Source: GIZBOT Manthes ಡಿಜಿಟಲ್ ಟೆಕ್
ಪ್ರಸ್ತುತ ಬಹತೇಕ ಗ್ರಾಹಕರು ಶಾಪಿಂಗ್‌ಗಾಗಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನತ್ತ ಮುಖ ಮಾಡುತ್ತಿರುವುದು ಸಾಮಾನ್ಯವಾಗಿದೆ. ಇ-ಕಾಮರ್ಸ್ ತಾಣಗಳು ಸಹ ಗ್ರಾಹಕರನ್ನು ಸೆಳೆಯಲು ಅತ್ಯುತ್ತಮ ಆಫರ್‌ಗಳನ್ನು ರಿಯಾಯಿತಿಗಳನ್ನು ಘೋಷಿಸುತ್ತಲೇ ಸಾಗಿವೆ. ಈ ನಿಟ್ಟಿನಲ್ಲಿ ಜನಪ್ರಿಯ ಫ್ಲಿಪ್‌ಕಾರ್ಟ್ ಇದೀಗ ಗ್ರಾಹಕರಿಗೆ ಗುಡ್‌ನ್ಯೂಸ್ ನೀಡಿದ್ದು, ಮೊಬೈಲ್ ಬೋನಾಂಜಾ ಮೇಳವನ್ನು ಆಯೋಜಿಸಿದೆ.
ಹೌದು, ಜನಪ್ರಿಯ ಇ-ಕಾಮರ್ಸ್ ಫ್ಲಿಪ್‌ಕಾರ್ಟ್ ಇದೀಗ ಮೊಬೈಲ್ ಬೋನಾಂಜಾ ಸೇಲ್ ಮೇಳವನ್ನು ಆಯೋಜಿಸಿದೆ. ಈ ಮೇಳವು ಡಿಸೆಂಬರ್ 7ರಿಂದ ಆರಂಭವಾಗಿದ್ದು, ಡಿಸೆಂಬರ್ 10ರ ವರೆಗೂ ನಡೆಯಲಿದೆ. ಆಪಲ್ ಐಫೋನ್, ROG ಗೇಮಿಂಗ್ ಫೋನ್, ಶಿಯೋಮಿಯ ಕೆಲವು ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ತಿಳಿಸಲಾಗಿದೆ. ಹೀಗಾಗಿ ಫೋನ್ ಖರೀದಿಸುವ ಗ್ರಾಹಕರಿಗೆ ಇದುವೇ ಬೆಸ್ಟ್ ಟೈಮ್ ಎನ್ನಬಹುದಾಗಿದೆ.

ಆಪಲ್ ಐಫೋನ್ SE(2020) ಆಪಲ್ ಐಫೋನ್ SE(2020) 4.7-ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 750x1334 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಆಪಲ್ ಕಂಪೆನಿ A 13 ಬಯೋನಿಕ್ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಈ ಹೊಸ ಐಫೋನ್ ರಿಯರ್ ಸೆಟ್‌ಅಪ್‌ನಲ್ಲಿ ಸಿಂಗಲ್ ಕ್ಯಾಮೆರಾ ಹೊಂದಿದೆ. ಈ ಮೇಳದಲ್ಲಿ ಐಫೋನ್ SE-2020 ಫೋನ್ ಅನ್ನು 32,999ರೂ.ಗಳಿಗೆ ಖರೀದಿಸಬಹುದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್-ಎಕ್ಸಿನೋಸ್ 9611 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಕೊಡುಗೆಯಲ್ಲಿ ಈ ಫೋನ್ ಆರಂಭಿಕ 15,499ರೂ.ಗಳಿಗೆ ಲಭ್ಯವಾಗಲಿದೆ.

ಶಿಯೋಮಿ ಮಿ 10T ಈ ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಜೊತೆಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ಆಸೂಸ್ ROG 3 ಸ್ಮಾರ್ಟ್‌ಫೋನ್ ಈ ಗೇಮಿಂಗ್ ಸ್ಮಾರ್ಟ್‌ಫೋನ್ 1,080x2,340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.59 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಮಾದರಿಯ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ಯಾಮ್‌ಡ್ರಾಗನ್ 865+ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. 6000mAh ಬ್ಯಾಟರಿ ಸಪೋರ್ಟ್ ಪಡೆದಿದೆ. ಇದರೊಂದಿಗೆ 30W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಒಳಗೊಂಡಿದೆ. ಕೊಡುಗೆಯಲ್ಲಿ ಈ ಫೋನ್ 1,750ರೂ. ವರೆಗೂ ರಿಯಾಯಿತಿಯಲ್ಲಿ ಲಭ್ಯ.
This News Article is a Copy of GIZBOT
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm