ಬ್ರೇಕಿಂಗ್ ನ್ಯೂಸ್
15-12-20 03:06 pm Source: GIZBOT ಡಿಜಿಟಲ್ ಟೆಕ್
ಎವರ್‌ಗ್ರೀನ್ ಮೊಬೈಲ್ ಬ್ರಾಂಡ್ ನೋಕಿಯಾ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್ ಪರಿಚಯಿಸಿರುವ ನೋಕಿಯಾ ಇದೀಗ ತನ್ನ ಹೊಸ ನೋಕಿಯಾ C 1 ಪ್ಲಸ್ ಅನ್ನು ಯುರೋಪಿಯನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಆಗಿದ್ದು, 4 ಜಿ ಸಂಪರ್ಕದೊಂದಿಗೆ ಆಂಡ್ರಾಯ್ಡ್ 10 (ಗೋ ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹೌದು, ನೋಕಿಯಾ ಕಂಪೆನಿ ತನ್ನ ಹೊಸ ನೋಕಿಯಾ C 1 ಪ್ಲಸ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಸಿಂಗಲ್ RAM ಮತ್ತು ಸ್ಟೋರೇಜ್ ಸಾಮರ್ಥ್ಯದಲ್ಲಿ ಸಿಗಲಿದೆ. ಇದು ಡಿಸ್‌ಪ್ಲೇ ಸುತ್ತಲೂ ದಪ್ಪವಾದ ಅಂಚನ್ನು ಹೊಂದಿದೆ ಜೊತೆಗೆ ಸಿಂಗಲ್ ರಿಯರ್ ಮತ್ತು ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಡಿಸ್‌ಪ್ಲೇ ವಿಶೇಷತೆ
ನೋಕಿಯಾ C1 ಪ್ಲಸ್ ಸ್ಮಾರ್ಟ್‌ಫೋನ್ 480x960 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 5.45 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 18: 9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇಯು 197 PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್
ನೋಕಿಯಾ C1 ಪ್ಲಸ್ ಸ್ಮಾರ್ಟ್‌ಫೋನ್ 1.4GHz ಗಡಿಯಾರ ವೇಗದೊಂದಿಗೆ ಹೆಸರಿಸದ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿದ್ದು, ಆಮಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 1GB RAM ಮತ್ತು 16GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 128GB ವರೆಗೆ ವಿಸ್ತರಿಸಬಹುದಾಗಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ C 1 ಪ್ಲಸ್ ಸ್ಮಾರ್ಟ್‌ಫೋನ್ ಏಕೈಕ 1GB RAM + 16GB ಶೇಖರಣಾ ಮಾದರಿಗೆ ಬೆಲೆ ಯುರೋ 69 (ಸುಮಾರು 6,200 ರೂ.) ಆಗಿದೆ. ಇದು ನೀಲಿ ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಯುರೋಪಿಯನ್ ಮಾರುಕಟ್ಟೆಯಲ್ಲಿ ಖರೀದಿಸಲು ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಫೋನ್ ಯಾವಾಗ ಬಿಡುಗಡೆಯಾಗುತ್ತದೆ ಎಂಬುದನ್ನು ನೋಕಿಯಾ ಹಂಚಿಕೊಂಡಿಲ್ಲ.
This News Article is a Copy of GIZBOT
29-07-26 09:54 pm
HK News Staffer
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:45 pm
HK News Desk
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm