ಬ್ರೇಕಿಂಗ್ ನ್ಯೂಸ್
28-12-20 04:15 pm Source: GIZBOT ಡಿಜಿಟಲ್ ಟೆಕ್
ಲಾವಾ ಮೊಬೈಲ್ ಕಂಪನಿಯು ಈಗಾಗಲೇ ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗುರುತಿಸಿಕೊಂಡಿದೆ. ಇತ್ತೀಚಿಗಷ್ಟೆ ಲಾವಾ ಸಂಸ್ಥೆಯು ಹೊಸದಾಗಿ ಲಾವಾ BeU-ಬಿಯು ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಇದರ ಬೆನ್ನಲೆ ಇದೀಗ ಸಂಸ್ಥೆಯು ಹೊಸ ವರ್ಷದ ಆರಂಭದಲ್ಲಿ ನೂತನ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.
ಹೌದು, ಲಾವಾ ಮೊಬೈಲ್ ಸಂಸ್ಥೆಯು ಇದೇ ಜನೆವರಿ 7, 2021ರಂದು ಹೊಸ ಸ್ಮಾರ್ಟ್‌ಫೋನ್ ಲಾಂಚ್ ಮಾಡುವುದಾಗಿ ಹೇಳಿಕೊಂಡಿದೆ. ಲಾವಾ BeU ಫೋನ್ ಅನಾವರಣ ಮಾಡುವಾಗ ಜನವರಿ ಮೊದಲ ವಾರದಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದಾಗಿ ಹೇಳಿದೆ. ಮುಂಬರುವ ಹೊಸ ಲಾವಾ ಸ್ಮಾರ್ಟ್‌ಫೋನ್‌ಗಳು ಮಧ್ಯ ಶ್ರೇಣಿಯ ವಿಭಾಗ ಮತ್ತು ಬಜೆಟ್ ವಿಭಾಗಗಳನ್ನು ಕೇಂದ್ರಿಕರಿಸಿರಲಿವೆ ಎನ್ನಲಾಗಿದೆ.

ಲಾವಾ ಕಂಪನಿಯು ಹೊಸದಾಗಿ ಲಾಂಚ್ ಮಾಡುವ ಸ್ಮಾರ್ಟ್‌ಫೋನ್‌ಗಳ ಅಂದಾಜು 5,000ರೂ. ಗಳ ಪ್ರೈಸ್‌ನಿಂದ ಸುಮಾರು 15,000ರೂ.ಗಳ ನಡುವೆ ಇರಲಿದೆ ಎಂದು ಹೇಳಲಾಗುತ್ತಿದೆ. ಕಂಪನಿಯು ಐದು ಹೊಸ ಸ್ಮಾರ್ಟ್‌ಫೋನ್‌ಗಳ ಅನಾವರಣ ಮಾಡುವ ನಿರೀಖ್ಷೆಗಳಿದ್ದು, ಅದರೊಂದಿಗೆ ಸ್ಮಾರ್ಟ್ ಫಿಟ್‌ನೆಸ್-ಟ್ರ್ಯಾಕಿಂಗ್ ಬ್ಯಾಂಡ್ ಅನ್ನು ಸಹ ತರಲಿದೆ. ಇನ್ನು ಹೊಸ ಡಿವೈಸ್‌ಗಳ ಜೊತೆಗೆ BeU ಫೋನ್ ಮತ್ತು ನೂತನ ಫೋನ್‌ಗಳು ಆನ್‌ಲೈನ್ ಮತ್ತು ಆಫ್‌ಲೈನ್ ಚಾನೆಲ್‌ಗಳ ಮೂಲಕ ಲಭ್ಯವಾಗಲಿದೆ.

ಲಾವಾ ಬಿಯು ಸ್ಮಾರ್ಟ್‌ಫೋನ್ ಹೊಸ ಯುನಿಸಾಕ್ SC9863A ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇನ್ನು ಈ ಲಾವಾ ಬಿಯು ಫೋನ್ 6.08 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 19.5: 9 ಆಕಾರ ಅನುಪಾತದೊಂದಿಗೆ ಪಡೆದಿದೆ. ಹಾಗೆಯೇ 2.5 ಡಿ ಬಾಗಿದ ಗಾಜಿನಿಂದ ರಕ್ಷಿಸಲಾಗಿದೆ ಮತ್ತು ವಾಟರ್‌ಡ್ರಾಪ್-ಶೈಲಿಯ ದರ್ಜೆಯನ್ನು ಹೊಂದಿದೆ.

ಲಾವಾ ಬಿಯು ಫೋನ್ 1.6GHz2 ಆಕ್ಟಾ-ಕೋರ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. 2 ಜಿಬಿ RAM, 32 ಜಿಬಿ ಸ್ಟೋರೇಜ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾಗಳು ಹೊಂದಿದ್ದು, 4060mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಈ ಫೋನ್ ಆಂಡ್ರಾಯ್ಡ್ 10 (ಗೋ ಎಡಿಷನ್) ಓಎಸ್ ನಲ್ಲಿ ಚಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದ್ದು, 13 ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕವನ್ನು ಎಫ್ / 1.85 ಲೆನ್ಸ್ ಜೊತೆಗೆ 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಹೊಂದಿದೆ. ಫೋನ್ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿದೆ, ಎಫ್ / 2.2 ಲೆನ್ಸ್ ಹೊಂದಿದೆ.
This News Article is a Copy of GIZBOT
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm