ಬ್ರೇಕಿಂಗ್ ನ್ಯೂಸ್
02-02-21 03:35 pm Source: GIZBOT Manthesh ಡಿಜಿಟಲ್ ಟೆಕ್
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಭಾರತದಲ್ಲಿ ಇದೀಗ ಹೊಸದಾಗಿ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಎಂಟ್ರಿ ಲೆವೆಲ್ ಮಾದರಿಯಲ್ಲಿ ಕಾಣಿಸಿಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ನಿಂದ ಗಮನ ಸೆಳೆದಿದೆ. ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ.
ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಹೊಸ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಅನ್ನು ಇಂದು (ಫೆ.2) ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಫೋನ್ ಮೀಡಿಯಾ ಟೆಕ್ SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB ಮತ್ತು 3GB RAM ಸಾಮರ್ಥ್ಯದ ವೇರಿಯಂಟ್ ಆಯ್ಕೆಯನ್ನು ಪಡೆದುಕೊಂಡಿದೆ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ 720x1560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಇನ್‌ಫಿನಿಟಿ V ಮಾದರಿಯಲ್ಲಿದೆ.

ಪ್ರೊಸೆಸರ್ ಮತ್ತು ಮೆಮೊರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಮತ್ತು 2GB RAM ಮತ್ತು 32GB ಆಂತರೀಕ ಸ್ಟೋರೇಜ್‌ನ ಎರಡು ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ 1TB ವರೆಗೂ ವಿಸ್ತರಿಸುವ ಅವಕಾಶ ಸಹ ನೀಡಿದೆ.

ಡ್ಯಯಲ್ ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಡ್ಯಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್. ಇದಲ್ಲದೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಐಎಸ್‌ಒ ಕಂಟ್ರೋಲ್, ಆಟೋ ಫ್ಲ್ಯಾಷ್, ಡಿಜಿಟಲ್ ಜೂಮ್, ಹೆಚ್‌ಡಿಆರ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕಪ್ ಅನ್ನು ಹೊಂದಿದ್ದು, ಇದು 10W ಸಾಮರ್ಥ್ಯದ ಸ್ಟ್ಯಾಂಡರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ 2GB RAM ಮತ್ತು 32GB ವೇರಿಯಂಟ್ ದರವು 6,999 ರೂ. ಆಗಿದೆ. ಹಾಗೆಯೇ 3GB RAM + 32GB ವೇರಿಯಂಟ್‌ನ ಬೆಲೆಯು 6,799ರೂ.ಗಳು ಆಗಿದೆ. ಈ ಫೋನ್ ಬ್ಲ್ಯಾಕ್, ಬ್ಲೂ, ಗ್ರೇ ಹಾಗೂ ರೆಡ್ ಬಣ್ಣಗಳ ಆಯ್ಕೆಗಳನ್ನು ಪಡೆದುಕೊಂಡಿದೆ. ಅಮೆಜಾನ್, ಸ್ಯಾಮ್‌ಸಂಗ್ ತಾಣಗಳಲ್ಲಿ ಮತ್ತು ರೀಟೈಲ್ ಸ್ಟೋರ್‌ಗಳಲ್ಲಿ ಇದೇ ಫೆ.9ರಂದು ಖರೀದಿಗೆ ಲಭ್ಯವಾಗಲಿದೆ.
This News Article is a Copy of GIZBOT
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm