ಬ್ರೇಕಿಂಗ್ ನ್ಯೂಸ್
08-04-21 02:40 pm Source: GIZBOT Manthesh ಡಿಜಿಟಲ್ ಟೆಕ್
ಜನಪ್ರಿಯ ಒಪ್ಪೊ ಕಂಪನಿಯು ತನ್ನ ಬಹು ನಿರೀಕ್ಷಿತ ಒಪ್ಪೊ ರೆನೋ 5 Z 5G ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಿದೆ. ಈ ಸ್ಮಾರ್ಟ್‌ಫೋನ್ ಒಪ್ಪೊ ರೆನೋ 5 ಸರಣಿಯಲ್ಲಿ ಲಾಂಚ್ ಆಗಿದೆ. ಈ ಹೊಸ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ.
ಹೌದು, ಒಪ್ಪೊ ಕಂಪೆನಿ ತನ್ನ ಹೊಸ ಒಪ್ಪೊ ರೆನೋ 5 Z 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು 5G ನೆಟ್‌ವರ್ಕ್ ಅನ್ನು ಬೆಂಬಲಿಸಲಿದ್ದು, ಮೀಡಿಯಾ ಟೆಕ್ Dimensity 800U SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿರುವ ಈ ಫೊನ್ 30W VOOC ಫ್ಲ್ಯಾಶ್ ಚಾರ್ಜಿಂಗ್ ಸಪೋರ್ಟ್ ಅನ್ನು ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇನ್ನುಳಿದಂತೆ ರೆನೋ 5 Z 5G ಸ್ಮಾರ್ಟ್‌ಫೋನ್ ಒಳಗೊಂಡಿರುವ ಇತರೆ ಫೀಚರ್ಸ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ
ರೆನೋ 5 Z 5G ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.
ಪ್ರೊಸೆಸರ್ ಕಾರ್ಯ
ರೆನೋ 5 Z 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 800U SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಕ್ವಾಡ್ ಕ್ಯಾಮೆರಾ ವಿನ್ಯಾಸ
ರೆನೋ 5 Z 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮೊನೊ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರೆನೋ 5 Z 5G ಸ್ಮಾರ್ಟ್‌ಫೋನ್ 4,310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 30W VOOC ಫ್ಲ್ಯಾಶ್ ಚಾರ್ಜ್ 4.0. ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, 3.5mm ಹೆಡ್‌ಫೋನ್ ಜ್ಯಾಕ್, ವೈಫೈ, ಬ್ಲೂಟೂತ್, ಹಾಟ್‌ಸ್ಪಾಟ್ ಆಯ್ಕೆಗಳನ್ನು ಬೆಂಬಲಿಸಲಿದೆ. ಜೊತೆಗೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ರೆನೋ 5 Z 5G ಸ್ಮಾರ್ಟ್‌ಫೋನ್ ಸಿಂಗಲ್ ಮೆಮೊರಿ ರೂಪಾಂತರದಲ್ಲಿ 8GB RAM ಮತ್ತು 128GB ಆಂತರಿಕ ಸಂಗ್ರಹಣೆಯನ್ನು ಹೊಂದಿದೆ. ಇದರ ಬೆಲೆ SGD 529 (ಭಾರತದಲ್ಲಿ ಅಂದಾಜು 29,300ರೂ. ಎಂದು ಊಹಿಸಲಾಗಿದೆ). ಇದು ಕಾಸ್ಮೊ ಬ್ಲೂ ಮತ್ತು ಫ್ಲೂಯಿಡ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
This News Article Is A Copy Of GIZBOT BUREAU
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm