ಬ್ರೇಕಿಂಗ್ ನ್ಯೂಸ್
17-05-21 05:45 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಇನ್ಫಿನಿಕ್ಸ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯನ್ನು ಹೊಂದಿದೆ ಎನ್ನಲಾಗಿದ್ದು, ಇದು ಇದೇ ಮೇ 20 ರಂದು ಬಿಡುಗಡೆ ಮಾಡಲು ಡೇಟ್ ಫಿಕ್ಸ್ ಆಗಿದೆ.
ಹೌದು, ಇನ್ಫಿನಿಕ್ಸ್ ಕಂಪೆನಿ ಹೊಸ ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್‌ಫೋನ್ ಬಿಡುಗಡೆಗೆ ಡೇಟ್ ಫಿಕ್ಸ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಹಾಟ್ 10 ಪ್ಲೇ ನಂತರ ಹಾಟ್ 10 ಸರಣಿಯ ಮೂರನೇ ಡಿವೈಸ್ ಆಗಿರಲಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ ಜಿ 85 ಪ್ರೊಸೆಸರ್ ಅನ್ನು ಒಳಗೊಂಡಿರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ಡಿಸ್‌ಪ್ಲೇ
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್‌ಫೋನ್ 720 x 1640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು 263 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.
ಪ್ರೊಸೆಸರ್
ಇದು ಮೀಡಿಯಾ ಟೆಕ್ ಹಿಲಿಯೊ G85 ಚಿಪ್‌ಸೆಟ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಎಕ್ಸ್‌ಒಎಸ್ 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 64GB ಮತ್ತು 6GB RAM + 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಅವಕಾಶವನ್ನು ಸಹ ಒಳಗೊಂಡಿದೆ. ಸುಗಮ ಗೇಮಿಂಗ್ ಕಾರ್ಯಕ್ಷಮತೆಗಾಗಿ ಡಾರ್-ಲಿಂಕ್ ತಂತ್ರಜ್ಞಾನದಂತಹ ಫೀಚರ್ಸ್‌ಗಳನ್ನು ಹೊಂದಿರಲಿದೆ.
ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ ಎಐ ಲೆನ್ಸ್ ಹೊಂದಿದೆ. ಇನ್ನು ಕ್ಯಾಮೆರಾ ಮೋಡ್‌ಗಳಲ್ಲಿ 240fps ಸ್ಲೋ-ಮೊಷನ್, ಟೈಮ್‌ಲ್ಯಾಪ್ಸ್ ಮತ್ತು ವೀಡಿಯೊ ಬೊಕೆ ಸೇರಿವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುವ ಸಾದ್ಯತೆ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಡ್ಯುಯಲ್-ಬ್ಯಾಂಡ್ ವೈ-ಫೈ ಮತ್ತು ಬ್ಲೂಟೂತ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್‌ಫೋನ್ ಭಾರತದಲ್ಲಿ 10,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್ ಹಾರ್ಟ್ ಆಫ್ ಓಷನ್, ಮೊರಾಂಡಿ ಗ್ರೀನ್, 7-ಡಿಗ್ರಿ ಪರ್ಪಲ್ ಮತ್ತು 95-ಡಿಗ್ರಿ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಆಯ್ಕೆಗಳಲ್ಲಿ ಬರಲಿದೆ. ಇದು ಇದೇ ಮೇ 20 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.
(Kannada Copy of Gizbot Kannada)
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm