ಬ್ರೇಕಿಂಗ್ ನ್ಯೂಸ್
25-05-21 05:27 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಟೆಕ್ನೋ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 9,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು 83.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್
ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಹಿಯೋಸ್ 7.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 512GBವರೆಗೆ ಇಂಟರ್ ಸ್ಟೋರೇಜ್ ಅನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಎಐ ಲೆನ್ಸ್ ಹೊಂದಿದೆ. ಈ ಕ್ಯಾಮೆರಾ ಸೆಟಪ್ ಅನ್ನು ಕ್ವಾಡ್ ಎಲ್ಇಡಿ ಫ್ಲ್ಯಾಷ್ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದು ಡ್ಯುಯಲ್ ಫ್ಲ್ಯಾಷ್ ಮಾಡ್ಯೂಲ್ ಹೊಂದಿದೆ. ಜೊತೆಗೆ ಸೆಲ್ಫಿ ಇಮೇಜ್‌ಗಳನ್ನು ಹೆಚ್ಚಿಸಲು ಫ್ರೀ ಲೋಡ್ ಮಾಡಲಾದ AI ಇಮೇಜ್ ಮೋಡ್ ಸಹ ಇದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ 7 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 35 ಗಂಟೆಗಳ ಟಾಕ್ ಟೈಮ್ ಅಥವಾ 34 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಮೈಕ್ರೋ-ಯುಎಸ್‌ಬಿ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಫೇಸ್ ಅನ್ಲಾಕ್ 2.0 ಮತ್ತು ಐ-ಟ್ರ್ಯಾಕಿಂಗ್ ಆಟೋಫೋಕಸ್ ಮತ್ತು ಟೈಮ್-ಲ್ಯಾಪ್ಸ್, ಸ್ಮೈಲ್-ಶಾಟ್, ಫೀಚರ್ಸ್‌ಗಳನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 7 ಪ್ರೊ 4GB RAM ಮತ್ತು 64GB ರೂಪಾಂತರಕ್ಕೆ 9,999 ರೂ. ಬೆಲೆಯನ್ನು ಹೊಂದಿದೆ. ಇದರ 6GB RAM ಮತ್ತು 64GB ಆಯ್ಕೆಯ ಬೆಲೆ 10,999 ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಆಲ್ಪ್ಸ್ ಬ್ಲೂ, ಮ್ಯಾಗ್ನೆಟ್ ಬ್ಲ್ಯಾಕ್ ಮತ್ತು ಸ್ಪ್ರೂಸ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಮೇ 28 ರ ಶುಕ್ರವಾರದಿಂದ ಅಮೆಜಾನ್ ಮೂಲಕ ಮಾರಾಟವಾಗಲಿದೆ. ಇನ್ನು ಲಾಂಚ್ ಆಫರ್‌ನಲ್ಲಿ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಇಎಂಐ ವಹಿವಾಟುಗಳು ಮತ್ತು ನೋ ಕಾಸ್ಟ್ ಇಎಂಐ ಆಯ್ಕೆಗಳನ್ನು ಬಳಸಿಕೊಂಡು ಖರೀದಿಸುವ ಗ್ರಾಹಕರಿಗೆ 10 ಪ್ರತಿಶತ ರಿಯಾಯಿತಿಯನ್ನು ನೀಡಲಾಗುತ್ತದೆ.
(Kannada Copy of Gizbot Kannada)
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm