ಬ್ರೇಕಿಂಗ್ ನ್ಯೂಸ್
02-07-21 10:26 am GIZBOT Mantesh ಡಿಜಿಟಲ್ ಟೆಕ್
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಮಾರ್ಟ್‌ಫೋನ್ ವಲಯದಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ಇದೆ. ಇನ್ನು ಈಗಾಗಲೇ ಈ ವರ್ಷದ ಮಧ್ಯಂತರದಲ್ಲಿ ನಾವೆಲ್ಲಾ ಇದ್ದೇವೆ. ಈ ವರ್ಷದ ಆರಂಭದಿಂದಲೂ ಇಲ್ಲಿ ತನಕ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿವೆ. ಬಜೆಟ್ ಬೆಲೆಯಿಂದ ಹಿಡಿದು ಪ್ರಿಮಿಯಂ ಬೆಲೆಯ ಸ್ಮಾರ್ಟ್‌ಫೋನ್‌ಗಳುಹೆಚ್ಚು ಗಮನ ಸೆಳೆದಿವೆ. ಇದರ ನಡುವೆ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಗೆ ಎಂಟ್ರಿ ನೀಡಿವೆ.
ಹೌದು, ಈಗಾಗಲೇ ಈ ವರ್ಷದಲ್ಲಿ ಅರ್ಧ ವರ್ಷ ಮುಗಿದಿದೆ. ಕಳೆದ ವರ್ಷದಂತೆ ಕೊರೊನಾ ಸಾಂಕ್ರಾಮಿಕದ ನಡುವೆ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಇವುಗಳಲ್ಲಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಗಮನ ಸೆಳೆದಿವೆ. ಹಾಗಾದ್ರೆ ಈ ವರ್ಷ ಭಾರತದಲ್ಲಿ 10,000 ರೂ ಗಿಂತ ಕಡಿಮೆ ಬೆಲೆಯಲ್ಲಿ ಲಾಂಚ್ ಆದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕಡ್ತಿವಿ ಓದಿರಿ.

ರಿಯಲ್‌ಮಿ C20, C21 ಮತ್ತು C25
ರಿಯಲ್‌ಮಿ ಈ ವರ್ಷ ಏಪ್ರಿಲ್‌ನಲ್ಲಿ ತನ್ನ ಬಜೆಟ್ ಬೆಲೆಯ ಸಿ-ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿತು. ಇದರಲ್ಲಿ ರಿಯಲ್‌ಮಿ C20, C21 ಮತ್ತು C25 ಅನ್ನು ಒಳಗೊಂಡಿದೆ. ರಿಯಲ್‌ಮಿ C25 ಸ್ಮಾರ್ಟ್‌ಫೋನ್ ಮೂಲ ಮಾದರಿ 9,999ರೂ, ಗಳಿಂದ ಪ್ರಾರಂಭವಾದರೆ, ರಿಯಲ್‌ಮಿ C21 7,999 ಮತ್ತು ರಿಯಲ್‌ಮಿ C 20 6,999ರೂ.ಗಳಿಂದ ಪ್ರಾರಂಭವಾಗುತ್ತದೆ.

ವಿವೋ Y12s
ವಿವೋ ಹೆಚ್ಚಾಗಿ ಮಧ್ಯ ಶ್ರೇಣಿಯ ವಿಭಾಗದಲ್ಲಿ ಫೋನ್‌ಗಳನ್ನು ಪರಿಚಯಿಸುತ್ತದೆ. ಬಜೆಟ್ ವಿಭಾಗದಲ್ಲಿ, ಈ ವರ್ಷ ವಿವೋ Y12s ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 9,990 ರೂ ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.51 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ, ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 439 ಪ್ರೊಸೆಸರ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಸಹ ಪ್ಯಾಕ್ ಮಾಡುತ್ತದೆ.

ರೆಡ್ಮಿ 9 ಪವರ್
ಶಿಯೋಮಿ ಸಂಸ್ಥೆ ರೆಡ್‌ಮಿ 9 ಪವರ್ ಸ್ಮಾರ್ಟ್‌ಫೋನ್ ಅನ್ನು ಬಜೆಟ್ ಬೆಲೆಯಲ್ಲಿ ಲಾಂಚ್ ಮಾಡಿತ್ತು. ಇದರ ಬೆಲೆ ಕೇವಲ 10,000ರೂ.ಗಳ ಒಳಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 ಪ್ರೊಸೆಸರ್ ಒಳಗೊಂಡಿದೆಎ. ಜೊತೆಗೆ 18W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F02s
ಸ್ಯಾಮ್‌ಸಂಗ್ ಕೂಡ ಈ ವರ್ಷ ಬಜೆಟ್ ಬೆಲೆಯ ಗ್ಯಾಲಕ್ಸಿ F02s ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಮತ್ತು ಇದು 3GB + 32GB ಮತ್ತು 4GB + 64GB ಯ ಎರಡು ರೂಪಾಂತರಗಳಲ್ಲಿ ಕ್ರಮವಾಗಿ 8,999 ಮತ್ತು 9,999ರೂ, ಬೆಲೆಯಲ್ಲಿ ಬರುತ್ತದೆ. ಗ್ಯಾಲಕ್ಸಿ F02s 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ, ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 450 ಪ್ರೊಸೆಸರ್ ಮತ್ತು 5,000 mAh ಬ್ಯಾಟರಿಯೊಂದಿಗೆ ಬರುತ್ತದೆ. ಇದು 13 ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
(Kannada Copy of Gizbot Kannada)
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am