ಬ್ರೇಕಿಂಗ್ ನ್ಯೂಸ್
18-08-21 02:42 pm Gizbot, Mutthuraju H M ಡಿಜಿಟಲ್ ಟೆಕ್
ಟಕ್ ವಲಯದಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಸ್ಮಾರ್ಟ್‌ಫೋನ್ ಇಲ್ಲದೆ ಹೊರ ಹೋಗುವುದು ಕೂಡ ಸಾಧ್ಯವಿಲ್ಲ ಅನ್ನೊ ಮಟ್ಟಿಗೆ ಕಾಲ ಬದಲಾಗಿದೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ತಮ್ಮದೇ ಅದ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿವೆ. ಇವುಗಳಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಇಂದು ಮಾರುಕಟ್ಟೆಯಲ್ಲಿವೆ. ಆದರೂ ಹೆಚ್ಚಿನ ಸ್ಮಾರ್ಟ್‌ಫೋನ್ ಪ್ರಿಯರು ಬಜೆಟ್ ಹಾಗೂ ಮಧ್ಯಮ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ.
ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಇನ್ನು ಎಂದಿನಂತೆ ಆಗಸ್ಟ್ ತಿಂಗಳಲ್ಲಿಯೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿವೆ. ಇವುಗಳಲ್ಲಿ ಬಜೆಟ್ ಹಾಗೂ ಮಿಡಲ್ ರೇಂಜ್ ಸ್ಮಾರ್ಟ್‌ಫೋನ್‌ಗಳು ಸೇರಿವೆ. ವಿವಿಧ ಬೆಲೆ ಶ್ರೇಣಿಗಳಲ್ಲಿ ಸಾಕಷ್ಟು ಸ್ಮಾರ್ಟ್‌ಫೋನ್‌ಗಳು ಮಾರಾಟವಾಗುತ್ತಿವೆ. ಇದರಲ್ಲಿ 20,000ರೂ,ಗಳ ಒಳಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ರೆಡ್ಮಿ
ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 19,999ರೂ, ಬೆಲೆಯಲ್ಲಿ ಲಭ್ಯವಾಗಲಿದೆ. ಇದು 6.67-ಇಂಚಿನ ಫುಲ್ ಹೆಚ್‌ಡಿ + ಸೂಪರ್ ಆಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ HDR-10 ಬೆಂಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ಮೇಲೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ರಿಯಲ್‌ಮಿ X7 5G
ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 19,999ರೂ. ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.4-ಇಂಚಿನ HD+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಸಹ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 4,310mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಕೂಡ 19,999 ರೂ ಬೆಲೆ ಹೊಂದಿದೆ.

ಐಕ್ಯೂ Z3 ಸ್ಮಾರ್ಟ್‌ಫೋನ್
ಐಕ್ಯೂ Z3 ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ 6.58-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು 4,400mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 55W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 19,999ರೂ,ಆಗಿದೆ.

ರೆಡ್ಮಿ ನೋಟ್ 10S
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್ ಒಂದು ಬಜೆಟ್ ಫೋನ್ ಆಗಿದ್ದು ಸಾಕಷ್ಟು ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ. ಇದು 6.43 ಇಂಚಿನ ಟಚ್‌ಸ್ಕ್ರೀನ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ ಜಿ95 ಪ್ರೊಸೆಸರ್ ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ 14,999 ರೂ,ಆಗಿದೆ.

ಪೊಕೊ X3 ಪ್ರೊ
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ ಹೆಚ್‌ಡಿ+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 860 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,160mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದರ ಬೆಲೆ 18,999 ರೂ ಆಗಿದೆ.
(Kannada Copy of Gizbot Kannada)
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm