ಬ್ರೇಕಿಂಗ್ ನ್ಯೂಸ್
02-09-21 02:12 pm Gizbot, Mantesh ಡಿಜಿಟಲ್ ಟೆಕ್
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿವೆ. ಅದರ ಮುಂದುವರಿದ ಭಾಗವಾಗಿ 5G ಆವೃತ್ತಿಯಲ್ಲಿ ಲಾಂಚ್ ಮಾಡಿರುವ ಗ್ಯಾಲಕ್ಸಿ M32 5G ಫೋನ್ ಸಹ ಗಮನ ಸೆಳೆದಿದೆ. ಈ ಗ್ಯಾಲಕ್ಸಿ M32 5G ಫೋನ್ ಇಂದು ಮಧ್ಯಾಹ್ನ 12ರಂದು ಇ-ಕಾಮರ್ಸ್ ತಾಣ ಅಮೆಜಾನ್ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್ ಸೇಲ್ ಆರಂಭಿಸಲಿದೆ. 6GB RAM + 128GB ಆಂತರೀಕ ಸ್ಟೋರೇಜ್‌ನ ಬೇಸ್ ವೇರಿಯಂಟ್‌ನ ಆರಂಭಿಕ ಬೆಲೆಯು 20,999ರೂ. ಆಗಿದೆ.
ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಇ-ಕಾಮರ್ಸ್ ತಾಣ ಅಮೆಜನಾ್ ನಲ್ಲಿ ಇಂದು (ಸೆ.2) ಮೊದಲ ಮಾರಾಟ ಶುರು ಮಾಡಲಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಕ್ವಾಡ್ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
ಪ್ರೊಸೆಸರ್ ಬಲ
ಯಾವುದು ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ಕ್ವಾಡ್ ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ, ಬ್ಲೂಟೂತ್, ಮತ್ತು ಜಿಪಿಎಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ ಬೆಲೆ 6GB RAM + 128GB ಸ್ಟೋರೇಜ್ ಮಾದರಿಗೆ 20,999ರೂ ಹೊಂದಿದೆ. ಇದು 8GB RAM + 128GB ಮಾದರಿಯ ಮಾಡೆಲ್ ಬೆಲೆಯು 22,999ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಲೇಟ್ ಬ್ಲಾಕ್ ಮತ್ತು ಸ್ಕೈ ಬ್ಲೂ ಬಣ್ಣಗಳ ಆಯ್ಕೆ ಪಡೆದಿದೆ. ಈ ಫೋನ್ ಅಮೆಜಾನ್ ಮೂಲಕ ಇಂದು (ಸೆಪ್ಟೆಂಬರ್ 2 ರಂದು) ಮೊದಲ ಮಾರಾಟ ಪ್ರಾರಂಭಿಸಲಿದೆ.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm