ಬ್ರೇಕಿಂಗ್ ನ್ಯೂಸ್
08-09-21 03:55 pm Gizbot, Mutthuraju H M ಡಿಜಿಟಲ್ ಟೆಕ್
ಐಟೆಲ್ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಅಗ್ಗದ ಸ್ಮಾರ್ಟ್‌ಫೋನ್ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಐಟೆಲ್ ವಿಷನ್ 2S ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಫೋನ್ ಆಂಡ್ರಾಯ್ಡ್ 11 (ಗೋ ಎಡಿಷನ್) ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು HD+ ರೆಸಲ್ಯೂಶನ್ ಡಿಸ್‌ಪ್ಲೇ ಹೊಂದಿದ್ದು, ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಹೌದು, ಐಟೆಲ್ ಕಂಪೆನಿ ಹೊಸ ಐಟೆಲ್ ವಿಷನ್ 2S ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 1.6 GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ ಮತ್ತು 32GB ಇಂಟರ್ ಸ್ಟೋರೇಜ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಪಡೆದುಕೊಂಡಿದ್ದು, ಬಳಕೆದಾರರಿಗೆ 24 ದಿನಗಳ ಸ್ಟ್ಯಾಂಡ್‌ಬೈ ಮತ್ತು 25 ಗಂಟೆಗಳ ಟಾಕ್ ಟೈಮ್ ನೀಡುತ್ತದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಡಿಸ್‌ಪ್ಲೇ
ಐಟೆಲ್ ವಿಷನ್ 2S ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 2.5D ಕರ್ವ್ಡ್ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದ್ದು, 90% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 269ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ.
ಪ್ರೊಸೆಸರ್ ಯಾವುದು?
ಐಟೆಲ್ ವಿಷನ್ 2S ಸ್ಮಾರ್ಟ್‌ಫೋನ್ ಯುನಿಸೋಕ್ SC9863A ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 2GB RAM + 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಕ್ಯಾಮೆರಾ ವಿಶೇಷ
ಐಟೆಲ್ ವಿಷನ್ 2ಎಸ್ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪೈಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ ವಿಜಿಎ ಸೆನ್ಸರ್ ಹೊಂದಿದೆ. ಇದು ವಾಟರ್‌ಡ್ರಾಪ್-ಶೈಲಿಯ ನಾಚ್‌ನೊಳಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ
ಐಟೆಲ್ ವಿಷನ್ 2ಎಸ್ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಬಳಕೆದಾರರಿಗೆ 24 ದಿನಗಳ ಸ್ಟ್ಯಾಂಡ್‌ಬೈ ಮತ್ತು 25 ಗಂಟೆಗಳ ಟಾಕ್ ಟೈಮ್ ನೀಡಲಿದೆ ಎಂದು ಹೇಳಿಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಈ ಫೋನ್ ಫೇಸ್ ಅನ್‌ಲಾಕ್ ಮತ್ತು ರಿಯರ್ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಸಹ ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಐಟೆಲ್ ವಿಷನ್ 2S ಸ್ಮಾರ್ಟ್‌ಫೋನ್ ಭಾರತದಲ್ಲಿ 2GB RAM + 32GB ಸ್ಟೋರೇಜ್ ಆಯ್ಕೆಗೆ 6,999ರೂ ಬೆಲೆಯನ್ನು ಹೊಂದಿದೆ. ಇದು ಗ್ರೇಡೇಶನ್ ಪರ್ಪಲ್, ಗ್ರೇಡೇಶನ್ ಬ್ಲೂ ಮತ್ತು ಡೀಪ್ ಬ್ಲೂ ನಂತಹ ಮೂರು ಗ್ರೇಡಿಯಂಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಿದೆ. ಇದಲ್ಲದೆ ಗ್ರಾಹಕರು ಇದನ್ನು ಖರೀದಿಸಿದ ನೂರು ದಿನಗಳಲ್ಲಿ ಉಚಿತವಾಗಿ ಒನ್-ಟೈಮ್ ಸ್ಕ್ರೀನ್ ರಿಪ್ಲೇಸ್‌ಮೆಂಟ್ ಅನ್ನು ಪಡೆದುಕೊಳ್ಳಬಹುದಾಗಿದೆ.
10-08-25 06:06 pm
Bangalore Correspondent
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm