ಬ್ರೇಕಿಂಗ್ ನ್ಯೂಸ್
16-09-21 11:15 am Gizbot, Mutthuraju H M ಡಿಜಿಟಲ್ ಟೆಕ್
ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬೇಕಾದ್ರೆ ರೇಷನ್ ಕಾರ್ಡ್ ಅವಶ್ಯಕವಾಗಿದೆ. ಅಷ್ಟೇ ಅಲ್ಲ ಬಡತನ ರೇಖೆಗಿಂತ ಕೆಳಗಿರುವ, ಸಾಮಾಜಿಕವಾಗಿ ಹಿಂದುಳಿದಿರುವ ಹಾಗೂ ಮಧ್ಯಮವರ್ಗದ ಜನತೆಗೆ ಪಡಿತರ ಚೀಟಿ ಅತಿ ಅಗತ್ಯವಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಪಡೆಯುವುದು, ತಿದ್ದುಪಡಿ ಮಾಡಿಸುವುದು, ಹೊಸದಾಗಿ ಹೆಸರು ಸೇರ್ಪಡೆ ಮಾಡಿಸಬೇಕಾದ ಸಂದರ್ಭ ಬಂದರೆ ಕೆಲವರಿಗೆ ಏನು ಮಾಡಬೇಕು ಅನ್ನೊದು ತಿಳಿದಿರುವುದಿಲ್ಲ.
ಹೌದು, ರೇಷನ್ ಕಾರ್ಡ್‌ಗೆ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವುದು? ಹೆಸರು ತಿದ್ದುಪಡಿ ಮಾಡಬೇಕಾದಾಗ ಕಚೇರಿಗೆ ಅಲೆದಾಡುವುದು ಕಿರಿಕಿರಿ ಎನಿಸಲಿದೆ. ಅದರಲ್ಲೂ ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತೆ. ಆದರೆ ಏನು ಮಾಡೋದು ಕೆಲವರಿಗೆ ಇದರ ಬಗ್ಗೆ ಎಲ್ಲಿ ಹೋಗಿ ವಿಚಾರಿಸಬೇಕು ಅನ್ನೊದು ತಿಳಿದಿರುವುದಿಲ್ಲ. ಅದಕ್ಕಾಗಿ ನೀವು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಬೇಕಾದರೆ? ಹೆಸರು ತಿದ್ದುಪಡಿ ಮಾಡಿಸುವುದಕ್ಕೆ ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ವಿಚಾರದಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಪಡಿತರ ಚೀಟಿಗಾಗಿ ಬಯೋಮೆಟ್ರಿಕ್ ದೃಡೀಕರಣವನ್ನು ಕುಟುಂಬದ ಸದದಸ್ಯರೆಲ್ಲರೂ ನೀಡಲೇಬೇಕಾದ ಅನಿವಾರ್ಯತೆ ಇದೆ. ಹಾಗೆಯೇ ಹೊಸದಾಗಿ ಪಡಿತರ ಚೀಟಿ ಪಡೆಯುವುದಕ್ಕೆ ಆಗಲಿ, ಹೊಸದಾಗಿ ಹೆಸರು ಸೇರ್ಪಡೆ ಮಾಡುವುದಕ್ಕಾಗಲಿ ಕೆಲವು ಅಗತ್ಯ ದಾಖಲೆಗಳನ್ನು ನೀವು ಒದಗಿಸಲೇಬೇಕು.

ರೇಷನ್ ಕಾರ್ಡ್‌ನಲ್ಲಿ ನಿಮ್ಮ ಮನೆಯ ಸದಸ್ಯರೆಲ್ಲರ ಹೆಸರು ಇದ್ದರೆ ಅನುಕೂಲವಿದೆ. ಇದೇ ಕಾರಣಕ್ಕೆ ನಿಮ್ಮ ಮಕ್ಕಳ ಹೆಸರನ್ನು ಕೂಡ ಸೇರಿಸುವುದು ಇಂದಿನ ದಿನಗಳಲ್ಲಿ ಅಗತ್ಯ. ಇನ್ನು ನೀವು ನಿಮ್ಮ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಬೇಕಾದ್ರೆ, ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅಗತ್ಯವಾಗಿ ನೀಡಬೇಕಾಗುತ್ತದೆ. ಇದಲ್ಲದೆ ನಿಮ್ಮ ಮನೆಗೆ ಮದುವೆಯ ನಂತರ ಬಂದ ಸೊಸೆ/ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಕಾರ್ಡ್, ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ರೇಷನ್ ಕಾರ್ಡ್‌ನಲ್ಲಿ ನಿಮ್ಮ ಹೆಸರನ್ನು ಸೇರಿಸಲು ಹೀಗೆ ಮಾಡಿ?
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm