ಬ್ರೇಕಿಂಗ್ ನ್ಯೂಸ್
24-09-21 11:07 am Gizbot, Mantesh ಡಿಜಿಟಲ್ ಟೆಕ್
ಜನಪ್ರಿಯ ಆಪಲ್ ಕಂಪನಿಯು ಬಿಡುಗಡೆ ಮಾಡಿರುವ ಹೊಸ ಐಫೋನ್ 13 ಸರಣಿಯು ಈಗಾಗಲೇ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸರಣಿಯು ಐಫೋನ್ 13, ಐಫೋನ್ 13 ಪ್ರೊ, ಐಫೋನ್ 13 ಪ್ರೊ ಮ್ಯಾಕ್ಸ್, ಮತ್ತು ಐಫೋನ್ 13 ಮಿನಿ ಮಾಡೆಲ್‌ಗಳನ್ನು ಒಳಗೊಂಡಿದೆ. ಐಫೋನ್ 13 ಸರಣಿಯ ಈ ನಾಲ್ಕು ಐಫೋನ್ ಮಾಡೆಲ್‌ಗಳು ಭಾರತದಲ್ಲಿ ಇಂದು (ಸೆ.24) ಫಸ್ಟ್ ಸೇಲ್ ಕಾಣಲಿವೆ.
ಹೌದು, ಆಪಲ್ ಕಂಪನಿಯ ಆಪಲ್ ಸ್ಟೋರ್ ಆನ್‌ಲೈನ್ ಮತ್ತು ಭಾರತದ ಪ್ರಮುಖ ಇ-ಕಾಮರ್ಸ್ ಸೈಟ್‌ಗಳು ಐಫೋನ್ 13 ಸರಣಿಯನ್ನು ಮಾರಾಟ ಮಾಡಲು ಪ್ರಾರಂಭಿಸುತ್ತವೆ. ಭಾರತದ ಜೊತೆಗೆ, ಐಫೋನ್ 13, ಐಫೋನ್ 13 ಪ್ರೊ, ಐಫೋನ್ 13 ಪ್ರೊ ಮ್ಯಾಕ್ಸ್, ಮತ್ತು ಐಫೋನ್ 13 ಮಿನಿ ಮಾಡೆಲ್‌ಗಳು ಆಸ್ಟ್ರೇಲಿಯಾ, ಕೆನಡಾ, ಚೀನಾ, ಜರ್ಮನಿ, ಜಪಾನ್, ಯುಕೆ, ಯುಎಸ್ ಸೇರಿದಂತೆ ಪ್ರಪಂಚದಾದ್ಯಂತ 30 ಇತರ ದೇಶಗಳಲ್ಲಿಯೂ ಮಾರಾಟ ಶುರು ಮಾಡಲಿದೆ. ಇನ್ನು ಈ ನಾಲ್ಕು ಮಾಡೆಲ್‌ಗಳ ಬೆಲೆ ಎಷ್ಟು?..ಫೀಚರ್ಸ್ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಭಾರತದಲ್ಲಿ ಬೆಲೆ ಎಷ್ಟು?..ಆಫರ್ ಏನು?
ಭಾರತದಲ್ಲಿ ಐಫೋನ್ 13 ಮಿನಿ 128 ಜಿಬಿ ವೇರಿಯಂಟ್ ಬೆಲೆ 69,900 ರೂ. ಗಳಾದರೆ, 256GB ವೇರಿಯಂಟ್ ಬೆಲೆ 79.900 ರೂ, ಮತ್ತು 512GB ವೇರಿಯಂಟ್ ಬೆಲೆ 99,900 ರೂ.ಗಳಾಗಿವೆ. ಹಾಗೆಯೇ ಐಫೋನ್ 13 ಫೋನಿನ ಬೆಲೆಗಳು ಕ್ರಮವಾಗಿ 79,900 ರೂ, 89,900 ರೂ ಮತ್ತು 99,900 ರೂ ಗಳಾಗಿವೆ. ಇನ್ನು ಐಫೋನ್ 13 ಪ್ರೊ ಮತ್ತು ಐಫೋನ್ 13 ಪ್ರೊ ಮ್ಯಾಕ್ಸ್ ಎರಡೂ 1 ಟಿಬಿ ವರೆಗೆ ಸ್ಟೋರೇಜ್ ಆಯ್ಕೆ ಪಡೆದಿವೆ. ಐಫೋನ್ 13 ಪ್ರೊ ಬೆಲೆ 128 ಜಿಬಿಗೆ 1,19,900 ರೂ., 256 ಜಿಬಿಗೆ 1,29,900 ರೂ., ರೂ. 512 ಜಿಬಿಗೆ 1,49,900 ರೂ. 1 ಟಿಬಿಗೆ 1,69,900 ಗಳಾಗಿವೆ. ಅಗ್ರ ಶ್ರೇಣಿಯ ಐಫೋನ್ 13 ಪ್ರೊ ಮ್ಯಾಕ್ಸ್ ಬೆಲೆ 1,29,900 ರೂ, 1,39,900 ರೂ, 1,59,900 ರೂ., ಮತ್ತು 1,79,900 ರೂ. ಆಗಿವೆ.

ಐಫೋನ್ 13 ಫೋನ್ ಫೀಚರ್ಸ್
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಈ ಫೋನ್ ಬ್ಯಾಟರಿ ಹಿಂದಿನ ಐಫೋನ್ 12 ಗಿಂತ ಉತ್ತಮವಾಗಿದೆ.

ಐಫೋನ್ 13 ಮಿನಿ ಫೋನ್ ಫೀಚರ್ಸ್
ಐಫೋನ್ 13 ಮಿನಿ ಫೋನ್ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. . 800nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

ಐಫೋನ್ 13 ಪ್ರೊ ಫೋನ್ ಫೀಚರ್ಸ್
ಐಫೋನ್ 13 ಪ್ರೊ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್ ಮಾಡಬಹುದಾಗಿದೆ. ಇನ್ನು ಈ ನಾಲ್ಕು ಬಣ್ಣಗಳ ಆಯ್ಕೆ ಪಡೆದಿದೆ.

ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಫೀಚರ್ಸ್
ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್ ಮೋಡ್ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್ ಬೆಂಬಲಿಸಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ನಾಲ್ಕು ಬಣ್ಣಗಳ ಆಯ್ಕೆ ಪಡೆದಿದೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm