ಬ್ರೇಕಿಂಗ್ ನ್ಯೂಸ್
06-04-22 08:26 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಪ್ರಮುಖ ಬಜೆಟ್ ಸ್ಮಾರ್ಟ್‌ಫೋನ್‌ಗಳ ತಯಾರಿಕಾ ಕಂಪೆನಿಗಳಲ್ಲಿ ಒಂದಾಗಿರುವ Realme ಇತ್ತೀಚಿಗಷ್ಟೇ ಪರಿಚಯಸಿರುವ ಬಜೆಟ್ ಬೆಲೆಯ Realme C31 4G ಸ್ಮಾರ್ಟ್‌ಫೋನ್ ಇಂದಿನಿಂದ ಮೊದಲ ಮಾರಾಟಕ್ಕೆ ಬರುತ್ತಿದೆ. ಏಪ್ರಿಲ್ 6, 2022 ರಂದು, ಅಂದರೆ ಇಂದು ಮಧ್ಯಾಹ್ನ 12 ಗಂಟೆಯಿಂದ Realme C31 ಸ್ಮಾರ್ಟ್‌ಫೋನ್ ಮಾರಾಟಕ್ಕೆ ಬರುತ್ತಿದ್ದು, realme.com, Flipkart ಮತ್ತು ಚಿಲ್ಲರೆ ವ್ಯಾಪಾರಿಗಳಲ್ಲಿ ಫೋನ್ ಖರೀದಿಗೆ ಲಭ್ಯವಿರುತ್ತದೆ ಎಂದು ಕಂಪೆನಿ ತಿಳಿಸಿದೆ. 6.5-ಇಂಚಿನ HD+ LCD ಡಿಸ್‌ಪ್ಲೇ, 5000 mAh ಬ್ಯಾಟರಿ ಮತ್ತು ಹಿಂಭಾಗದಲ್ಲಿ ಟ್ರಿಪಲ್-ಕ್ಯಾಮೆರಾ ಸೆಟಪ್ ನಂತಹ ವೈಶಿಷ್ಟ್ಯಗಳ ಜೊತೆಗೆ 12nm Unisoc T612 ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ಚಾಲಿತವಾಗಿರುವ ನೂತನ Realme C31 4G ಸ್ಮಾರ್ಟ್‌ಫೋನ್ ತನ್ನ ಕಡಿಮೆ ಬೆಲೆಯಿಂದಲೇ ಗ್ರಾಹಕರನ್ನು ಸೆಳೆಯುತ್ತಿದೆ.
ಭಾರತದಲ್ಲಿ Realme C31 ಸ್ಮಾರ್ಟ್‌ಫೋನ್ ಬೆಲೆಗಳು 8,999 ರೂ.ಗಳಿಂದ ಆರಂಭವಾಗಿದ್ದು, ಮೂಲ 3GB + 32GB ರೂಪಾಂತರದ ಸ್ಮಾರ್ಟ್‌ಫೋನಿನ ಬೆಲೆಯನ್ನು 8,999 ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದೇ ಸ್ಮಾರ್ಟ್‌ಫೋನ್ 4GB+64GB ರೂಪಾಂತರದಲ್ಲಿಯೂ ಲಭ್ಯವಿದ್ದು, ಇದರ ಬೆಲೆ 9,999 ರೂ.ಗಳಾಗಿವೆ. ಕಂಪನಿಯು Realme C31 ಸ್ಮಾರ್ಟ್‌ಫೋನನ್ನು ಎರಡು ಬಣ್ಣದ ರೂಪಾಂತರಗಳಲ್ಲಿ ಬಿಡುಗಡೆ ಮಾಡಿದ್ದು, ಲೈಟ್ ಸಿಲ್ವರ್ ಮತ್ತು ಡಾರ್ಕ್ ಗ್ರೀನ್.ಬಣ್ಣಗಳಲ್ಲಿ ಗ್ರಾಹಕರು ಈ ನೂತನ ಸ್ಮಾರ್ಟ್‌ಫೋನನ್ನು ಖರೀದಿಸಬಹುದು. ಇನ್ನು 8,999 ರೂ. ಬೆಲೆಯಲ್ಲಿ ಈ ಫೋನಿನ ಸಂಪೂರ್ಣ ವೈಶಿಷ್ಟ್ಯಗಳು ಗ್ರಾಹಕರನ್ನು ಸೆಳೆಯುವಂತಿದ್ದು, ನೂತನ Realme C31 4G ಸ್ಮಾರ್ಟ್‌ಫೋನ್ ಹೊಂದಿರುವ ವೈಶಿಷ್ಟ್ಯಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ.

ಭಾರತದಲ್ಲಿ ನೂತನ Realme C31 ಸ್ಮಾರ್ಟ್‌ಫೋನ್ Android 11 ಆಧಾರಿತ Realme UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಹ್ಯಾಂಡ್‌ಸೆಟ್ 6.5-ಇಂಚಿನ HD+ (720x1,600 ಪಿಕ್ಸೆಲ್‌ಗಳು) LCD ಡಿಸ್ಪ್ಲೇಯೊಂದಿಗೆ 88.7 ಪ್ರತಿಶತದಷ್ಟು ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರುವುದಾಗಿ ಕಂಪೆನಿ ಹೇಳಿದೆ. Realme C31 ಫೋನ್ 12nm Unisoc T612 ಪ್ರೊಸೆಸರ್‌ನಿಂದ ಚಾಲಿತವಾಗಿದ್ದು, 4GB ಯ RAMನೊಂದಿಗೆ ಜೋಡಿಸಲಾಗಿದೆ ಮತ್ತು ಈ ಫೋನಿನ ಆಂತರಿಕ ಸಂಗ್ರಹಣೆಯನ್ನು ಮೈಕ್ರೊ SD ಕಾರ್ಡ್‌ನೊಂದಿಗೆ 1TB ವರೆಗೆ ವಿಸ್ತರಿಸಬಹುದಾಗಿದೆ. Realme C31 ಸ್ಮಾರ್ಟ್‌ಫೋನಿನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಕಂಪೆನಿಯ ಪ್ರಕಾರ, ಇದು ಸ್ಟ್ಯಾಂಡ್‌ಬೈನಲ್ಲಿ 45 ದಿನಗಳ ವರೆಗೂ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಿಕೊಂಡಿದೆ.
Realme C31 ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದು f/2.2 ಅಪರ್ಚರ್ ಲೆನ್ಸ್ ಮತ್ತು 4x ಡಿಜಿಟಲ್ ಜೂಮ್‌ನೊಂದಿಗೆ 13-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, f/2.4 ಅಪರ್ಚರ್ ಲೆನ್ಸ್‌ನೊಂದಿಗೆ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಮತ್ತು f/2.8 ಅಪರ್ಚರ್ ಲೆನ್ಸ್‌ನೊಂದಿಗೆ ಅನಿರ್ದಿಷ್ಟ ಏಕವರ್ಣದ ಸಂವೇದಕವನ್ನು ಹೊಂದಿದೆ. ಹ್ಯಾಂಡ್‌ಸೆಟ್‌ನಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 5-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು f/2.2 ಅಪರ್ಚರ್ ಲೆನ್ಸ್‌ನೊಂದಿಗೆ ಅಳವಡಿಸಲಾಗಿದೆ. ಇದು 2.4 GHz Wi-Fi ನೆಟ್‌ವರ್ಕ್ ಮತ್ತು ಬ್ಲೂಟೂತ್ v5 ಗೆ ಭವಿಷ್ಯದ ಬೆಂಬಲದೊಂದಿಗೆ 4G LTE ಬೆಂಬಲದ ಫೋನ್ ಆಗಿದ್ದು, ಈ ಸಾಧನದಲ್ಲಿ 3.5mm ಆಡಿಯೋ ಜ್ಯಾಕ್ ಜೊತೆಗೆ USB ಟೈಪ್-C ಪೋರ್ಟ್ ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಹ ಇದೆ.
Realme C31 Smartphone To Go On Sale For The First Time In India Today.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm