ಬ್ರೇಕಿಂಗ್ ನ್ಯೂಸ್
13-05-22 08:23 pm Source: Vijayakarnataka ಡಿಜಿಟಲ್ ಟೆಕ್
2022ರ ಗೂಗಲ್ ವಾರ್ಷಿಕ ಸಮ್ಮೇಳನದಲ್ಲಿ( Google I/O 2022) ಬಿಡುಗಡೆಗೊಂಡಿರುವ ಗೂಗಲ್‌ನ ಕೈಗೆಟುಕುವ ಸ್ಮಾರ್ಟ್‌ಫೋನ್ 'Google Pixel 6a' ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದು ಖಚಿತವಾಗಿದೆ. ಈ ವರ್ಷದ ಅಂತ್ಯದಲ್ಲಿ ತನ್ನ ವಿನೂತನ ಪಿಕ್ಸೆಲ್ 6ಎ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಮಾರಾಟ ಮಾಡಲಾಗುವುದಾಗಿ ಗೂಗಲ್ ಕಂಪೆನಿ ಅಧಿಕೃತವಾಗಿ ದೃಢಪಡಿಸಿದ್ದು, ಸುಮಾರು ಎರಡು ವರ್ಷಗಳ ನಂತರ ಭಾರತದಲ್ಲಿ ಗೂಗಲ್ ಪಿಕ್ಸೆಲ್ ಸರಣಿಯ ಸ್ಮಾರ್ಟ್‌ಫೋನ್ ಲಭ್ಯವಾಗಲಿದೆ. 2020 ರಲ್ಲಿ ಭಾರತದಲ್ಲಿ ತಡವಾಗಿ ಬಿಡುಗಡೆಯಾಗಿದ್ದ ಪಿಕ್ಸೆಲ್ 4ಎ ನಂತರ ದೇಶದಲ್ಲಿ ಇದೀಗ ಪಿಕ್ಸೆಲ್ 6ಎ ಸ್ಮಾರ್ಟ್‌ಫೋನ್ ಬಿಡುಗಡೆಯಾಗುತ್ತಿದ್ದು, ಬಜೆಟ್ ಬೆಲೆಯಲ್ಲಿ ಬಿಡುಗಡೆಗೊಂಡಿರುವ 'Google Pixel 6a' ಸ್ಮಾರ್ಟ್‌ಫೋನಿನ ಕುರಿತ ಎಲ್ಲಾ ಮಾಹಿತಿಯನ್ನು ತಿಳಿಯೋಣ
Google Pixel 6a ವೈಶಿಷ್ಟ್ಯಗಳು
ನೂತನ Google Pixel 6a ಸ್ಮಾರ್ಟ್‌ಫೋನ್ 6.1-ಇಂಚಿನ ಫುಲ್ HD+ (1,080 x 2,400 ಪಿಕ್ಸೆಲ್‌ಗಳು) OLED ಡಿಸ್‌ಪ್ಲೇಯನ್ನು ಹೊಂದಿದೆ. 20:9 ಅನುಪಾತದಲ್ಲಿರುವ ಈ ಸ್ಮಾರ್ಟ್‌ಫೋನಿನ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಯನ್ನು ಹೊಂದಿದೆ ಮತ್ತು 60Hz ರಿಫ್ರೆಶ್ ರೇಟ್ ಅನ್ನು ಹೊಂದಿರುವದನ್ನು ಸಹ ನಾವು ಗಮನಿಸಬಹುದು. ಇನ್ನು ಈ ನೂತನ Google Pixel 6a ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್‌ನಿಂದ ಚಾಲಿತವಾಗಿದೆ. ಈ ಪ್ರೊಸೆಸರ್ ಅನ್ನು 6GB LPDDR5 RAM ನೊಂದಿಗೆ ಜೋಡಿಸಲಾಗಿದೆ. ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿರುವ ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ.
ಫೋಟೋಗಳು ಮತ್ತು ವೀಡಿಯೊಗಳಿಗಾಗಿ, Google Pixel 6a ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬಿಡುಗಡೆಯಾಗಿದೆ. ರಿಯರ್ ಕ್ಯಾಮೆರಾವು f/1.7 ಅಪಾರ್ಚರ್ ನೊಂದಿಗೆ ಲೆನ್ಸ್‌ನೊಂದಿಗೆ 12.2-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕವ ಮತ್ತು 12-ಮೆಗಾಪಿಕ್ಸೆಲ್ ಸೆಕೆಂಡರಿ ಸಂವೇದಕದೊಂದಿಗೆ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಒಳಗೊಂಡಿದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ, Google Pixel 6a ಸ್ಮಾರ್ಟ್‌ಫೋನಿನಲ್ಲಿ f/2.0 ಅಪರ್ಚರ್ ಲೆನ್ಸ್‌ನೊಂದಿಗೆ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. Google Pixel 6a ಹಿಂದಿನ ಕ್ಯಾಮರಾವು 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ನೀಡುತ್ತದೆ ಮತ್ತು ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.
Google Pixel 6a ಸ್ಮಾರ್ಟ್‌ಫೋನ್ 128GB ಅಂತರ್ಗತ ಸಂಗ್ರಹಣೆಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ವೈಶಿಷ್ಟ್ಯಗಳು ಸೇರಿವೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕದೊಂದಿಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಬ್ಯಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕವನ್ನು ಸ್ಮಾರ್ಟ್‌ಫೋನ್ ಒಳಗೊಂಡಿವೆ. ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುವ Pixel 6a ನಲ್ಲಿ Google 4,410mAh ಬ್ಯಾಟರಿಯನ್ನು ಒದಗಿಸಲಾಗಿದ್ದು, ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ತೀವ್ರ ಬ್ಯಾಟರಿ ಸೇವರ್ ಮೋಡ್‌ನೊಂದಿಗೆ ನೀಡುತ್ತದೆ ಎಂದು ಹೇಳಲಾಗಿದೆ,
Google Pixel 6a ಬೆಲೆ, ಲಭ್ಯತೆ
Google Pixel 6a ಸ್ಮಾರ್ಟ್‌ಫೋನ್ ಅನ್ನು $449 ಡಾಲರ್‌ಗಳ ಬೆಲೆಯಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಜುಲೈ 21 ರಿಂದ ಯುಎಸ್‌ನಲ್ಲಿ ಚಾಕ್, ಚಾರ್ಕೋಲ್ ಮತ್ತು ಸೇಜ್ ಬಣ್ಣ ಆಯ್ಕೆಗಳಲ್ಲಿ Google Pixel 6a ಸ್ಮಾರ್ಟ್‌ಫೋನ್ ಮಾರಾಟವಾಗಲಿದೆ ಎಂದು ಕಂಪೆನಿ ತಿಳಿಸಿದೆ. ಭಾರತೀಯ ರೂಪಾಯಿಗಳ ಬೆಲೆಯಲ್ಲಿ Google Pixel 6a ಸ್ಮಾರ್ಟ್‌ಫೋನಿನ ಬೆಲೆ ಸರಿಸುಮಾರು 34,800 ರೂ.ಗಳಾಗಬಹುದರೆ, ದೇಶದಲ್ಲಿ 30 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ Google Pixel 6a ಸ್ಮಾರ್ಟ್‌ಫೋನ್ ಬಿಡುಗಡೆಯಾಗಲಿದೆ ಎಂದು ಅಂದಾಜಿಸಬಹುದು. ಆದರೆ, ಇದೀಗ ದೇಶದಲ್ಲಿ Google Pixel 6a ಸ್ಮಾರ್ಟ್‌ಫೋನಿನ ಬೆಲೆ ಮತ್ತು ಅಧಿಕೃತ ಬಿಡುಗಡೆ ದಿನಾಂಕದ ಬಗ್ಗೆ ಗೂಗಲ್ ಪ್ರಕಟಿಸಿಲ್ಲ. ಆದಾಗ್ಯೂ, ಈ ವರ್ಷದ ಅಂತ್ಯದಲ್ಲಿ ಜುಲೈತಿಂಗಳ ವೇಳೆಗೆ ಭಾರತದಲ್ಲಿ Pixel 6a ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಬಹುದು ಎಂದು ಹೇಳಲಾಗಿದೆ..
Pixel 6a Will Launch In India, Google’s Phone In The Country In Almost 2 Years.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm