ಬ್ರೇಕಿಂಗ್ ನ್ಯೂಸ್
11-11-22 07:38 pm Source: one india ಉದ್ಯೋಗ
ಶಿವಮೊಗ್ಗ, ನವೆಂಬರ್ 11; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯಲ್ಲಿ ನವೆಂಬರ್ 15ರ ಮಂಗಳವಾರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್‍ಸಿಎಸ್) ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಇದು ಅತಿಯಾಯ್ತು ಅನ್ನಿಸಲಿಲ್ವಾ..?
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606/ 9482023412.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ನವೆಂಬರ್ 14ರಂದು ಅಪ್ರೆಂಟಿಶಿಪ್ ಮೇಳ; ವಿಜನಗರ ಜಿಲ್ಲೆಯ ಹೊಸಪೇಟೆ ಜಂಬುನಾಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಅಪ್ರೆಂಟಿಶಿಪ್ ಮೇಳವನ್ನು ನವೆಂಬರ್ 14ರಂದು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಮೇಳದಲ್ಲಿ NMDC Ltd, BMM, JSW, MSPL Group of Companies, RBSSN, MUNER GROUPS, TOYOTA KIRLOSKAR Banglore, SMIORE, KFIL, BEVINAHALLI MNC ಕಂಪನಿಗಳು ಸೇರಿದಂತೆ ಬೆಂಗಳೂರಿನ ಇನ್ನಿತರ ಉದ್ದಿಮೆದಾರರು ಪಾಲ್ಗೊಳ್ಳಲಿದ್ದಾರೆ.
ಶಿಶಿಕ್ಷು ತರಬೇತಿಗೆ ಐಟಿಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
job fair in shivamogga on november 15.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am