ಬ್ರೇಕಿಂಗ್ ನ್ಯೂಸ್
12-03-22 07:20 pm Source: kannadaprabha ಉದ್ಯೋಗ
ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು: 9
ಹುದ್ದೆ ಹೆಸರು: ಕಿರಿಯ ಸಹಾಯಕರು/ ಬೆರಳಚ್ಚುಗಾರರು
ಕರ್ತವ್ಯ ಸ್ಥಳ: ವಿಜಯಪುರ ಜಿಲ್ಲೆ
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯದ ಪದವಿಯಲ್ಲಿ ಎಲ್ಲಾ ವರ್ಷ/ ಸೆಮಿಸ್ಟರ್ ಗಳ ಸರಾಸರಿ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಬಿ.ಕಾಂ/ ಸಹಕಾರ ವಿಷಯದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ: ಮಾಸಿಕ ರೂ. 30,350 ರಿಂದ ರೂ. 58,250 ಶ್ರೇಣಿ
ಆಯ್ಕೆ ವಿಧಾನ:
ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ವಿದ್ಯಾರ್ಹತೆ ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ 1:20ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ಮಹಾವೀರ ರೋಡ, ವಿಜಯಪುರ – 586101
ನಿಗದಿತ ಅರ್ಜಿ ಶುಲ್ಕದ ವಿವರ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 1,000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25, 2022
ಹೆಚ್ಟಿನ ಮಾಹಿತಿಗಾಗಿ (ಅಧಿಸೂಚನೆ)
https://ggle.io/4lCd
Recruitment 2022, 9 vacancies in government employees cooperative bank.
30-08-25 04:51 pm
Bangalore Correspondent
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
30-08-25 06:44 pm
HK News Desk
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
30-08-25 09:16 pm
Udupi Correspondent
Talapady Accident, Mangalore, Ksrtc Bus: ತಲಪಾ...
30-08-25 04:23 pm
Golden Era of AI Business: YatiCorp Offers As...
30-08-25 04:11 pm
ಕೊಲ್ಲೂರಿಗೆ ಬಂದು ನದಿಗೆ ಸ್ನಾನಕ್ಕಿಳಿದಿದ್ದ ಬೆಂಗಳೂ...
30-08-25 12:55 pm
Mangalore Talapady, Speaker Khader Orders Pro...
30-08-25 11:55 am
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm