ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm