ಬ್ರೇಕಿಂಗ್ ನ್ಯೂಸ್
30-05-22 10:23 am Bengalore Correspondent ಕರ್ನಾಟಕ
ಬೆಂಗಳೂರು, ಮೇ 30 : ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ನೀಡಿರುವ ಮುಖ್ಯಮಂತ್ರಿ ಚಂದ್ರು, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. 2018 ರಲ್ಲಿ ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ಹೆಸರನ್ನು ಅಂತಿಮಗೊಳಿಸಲಾಗಿತ್ತು. ಕೊನೆಗೆ ಪ್ರಭಾವಿ ನಾಯಕರೊಬ್ಬರ ಹಸ್ತಕ್ಷೇಪದಿಂದ ಬದಲಾವಣೆ ಮಾಡಲಾಗಿತ್ತು. ಇದು ನನಗೆ ನೋವುಂಟು ಮಾಡಿತ್ತು.
ಅತಿ ಹಿಂದುಳಿದ ಸಮುದಾಯಗಳ ಪರವಾಗಿ ನನ್ನ ಹೋರಾಟ ಮುಂದುವರಿಯುತ್ತದೆ. ಯಾವ ಪಕ್ಷ ಸೇರಬೇಕು ಎಂಬ ಬಗ್ಗೆ ನಿರ್ಧರಿಸಿಲ್ಲ. ರಾಜ್ಯಸಭೆ ಸ್ಥಾನದ ಬೇಡಿಕೆ ಮುಂದಿಟ್ಟು ರಾಜಿನಾಮೆ ನೀಡಿದ್ದೇನೆ ಎನ್ನುವುದು ಸುಳ್ಳು. ಅಂತಹ ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ ಎಂದರು. ಆಮ್ ಆದ್ಮಿ ಪಕ್ಷ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎನ್ನುವ ಕುತೂಹಲ ಉಂಟಾಗಿದೆ.
Disappointed over being denied the party’s nomination for the Legislative Council, popular Kannada actor and former MLC Mukhyamantri Chandru on Sunday resigned from the primary membership of the Congress.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm