ಬ್ರೇಕಿಂಗ್ ನ್ಯೂಸ್
04-06-22 11:45 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಉಂಟಾಗಿದ್ದ ವಿವಾದಕ್ಕೆ ಅಂತ್ಯ ಹಾಡಲು ರಾಜ್ಯ ಸರಕಾರ ಮುಂದಾಗಿದ್ದು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನೇ ವಿಸರ್ಜಿಸಿ ಆದೇಶ ಹೊರಡಿಸಿದೆ. ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿ ಶುಕ್ರವಾರ ಸಂಜೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾತುಕತೆ ಬಳಿಕ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯನ್ನು ವಿಸರ್ಜಿಸಲು ನಿರ್ಧಾರ ಕೈಗೊಂಡಿದ್ದಾರೆ.
ಇದಲ್ಲದೆ, ಪಂಡಿತಾರಾಧ್ಯ ಸ್ವಾಮಿಗಳು ಮತ್ತು ಬಾಲಗಂಗಾಧರನಾಥ ಸ್ವಾಮಿಗಳ ಆಕ್ಷೇಪದ ಹಿನ್ನೆಲೆಯಲ್ಲಿ ಬಸವಣ್ಣ ಮತ್ತು ಕುವೆಂಪು ಕುರಿತ ಆಕ್ಷೇಪಾರ್ಹ ವಿಚಾರಗಳನ್ನು ಕೈಬಿಟ್ಟು ಸರಿಪಡಿಸಲು ನಿರ್ಧಾರಕ್ಕೆ ಬರಲಾಗಿದೆ. ಸದ್ಯಕ್ಕೆ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಕೆಲಸ ಮುಗಿದಿರುವುದರಿಂದ ಸಮಿತಿಯನ್ನು ವಿಸರ್ಜನೆ ಮಾಡಲಾಗುವುದು. ಪ್ರಸ್ತುತ ಪಠ್ಯದಲ್ಲಿ ಮತ್ತೆ ಪರಿಷ್ಕರಣೆ ಅಗತ್ಯ ಇದ್ದರೆ ಅದನ್ನು ಮಾಡಲು ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಸವಣ್ಣನ ಕುರಿತ ಪಠ್ಯವನ್ನು ಪರಿಷ್ಕರಿಸಲಾಗುವುದು. ಕುವೆಂಪು ರಚಿಸಿದ ನಾಡಗೀತೆಯನ್ನು ವಿಕೃತಗೊಳಿಸಿ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಸೈಬರ್ ಕ್ರೈಂ ವಿಭಾಗಕ್ಕೆ ವಹಿಸಲಾಗಿದೆ. ವಿರೂಪಗೊಳಿಸಿದ ಆರೋಪಿಗಳನ್ನು ಪತ್ತೆಮಾಡಿ ಕ್ರಮ ಜರುಗಿಸಲಾಗುವುದು. ಕುವೆಂಪು ಅವರ ಗದ್ಯ ಮತ್ತು ಪದ್ಯ ಕುರಿತ ಪಾಠವನ್ನು ಹೆಚ್ಚಿಸಲಾಗಿದ್ದು ಈ ಹಿಂದೆ ಏಳು ಇದ್ದುದನ್ನು ಈಗ 10ಕ್ಕೆ ಏರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ಕುರಿತು ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ. ಇಸ್ಲಾಂ, ಕ್ರೈಸ್ತ ಧರ್ಮದ ಪರಿಚಯದ ಜೊತೆ ಹಿಂದೂ ಧರ್ಮ ವಿಷಯವನ್ನೂ ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಈ ಬಗ್ಗೆ ಸಿಎಂ ಭೇಟಿ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ರಾಜ್ಯದಲ್ಲಿ ಅನೇಕ ಬಾರಿ ಪಠ್ಯ ಪರಿಷ್ಕರಣೆ ಆಗಿದೆ. ಆಗೆಲ್ಲ ವಿರೋಧವೂ ವ್ಯಕ್ತವಾಗಿದೆ. ಬರಗೂರು ಸಮಿತಿ ಬಗ್ಗೆ ಆಕ್ಷೇಪ ಬಂದಾಗ ಹೊಸ ಸಮಿತಿ ರಚನೆ ಮಾಡಲಾಗಿತ್ತು. ಈಗಾಗಲೇ ಹೊಸ ಸಮಿತಿ ರಚಿಸಿದ ಪಠ್ಯಪುಸ್ತಕ ಪ್ರಿಂಟ್ ಮಾಡಿ ಹಲವು ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಹಿಂದಿನ ಸರ್ಕಾರದ ಬರಗೂರು ರಾಮಚಂದ್ರ ಸಮಿತಿಯಲ್ಲಿ ಬಸವಣ್ಣ ಪಾಠ ಪರಿಷ್ಕರಣೆಯಾಗಿತ್ತು. ಈಗಿನ ಸಮಿತಿ ಕೂಡ ಅದನ್ನು ಮುಂದುವರೆಸಿತ್ತು, ಆದರೆ ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ಕೆಲ ಸ್ವಾಮೀಜಿಗಳ ಬಸವಣ್ಣನ ಪಠ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದನ್ನು ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
In a major development, the Karnataka government has disbanded the Textbook Revision Committee headed by writer Rohith Chakrathirtha. The development comes after the committee faced flak, with allegations of saffronisation of school syllabus and insulting great personalities of Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm