ಬ್ರೇಕಿಂಗ್ ನ್ಯೂಸ್
04-06-22 07:13 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 04: ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ... ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.
ಏನು ಹೇಳಿಕೆ ಕೊಟ್ಟಿದ್ದರು ಸಿದ್ದರಾಮಯ್ಯ?
ಆರ್,ಎಸ್.ಎಸ್ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ. ಇವರೇನು ಮನೆಗೆ ಬೆಂಕಿ ಹಚ್ಚುವ ಅಥವಾ ಬೆಂಕಿಯನ್ನು ಸಮಾಜ ವಿರೋಧಿ ಕೆಲಸಕ್ಕೆ ಬಳಸಿಲ್ಲ.

ಇದು ಕಾನೂನು ವಿರೋಧಿ ಕೃತ್ಯ ಹೇಗಾಗುತ್ತದೆ? ಕಾನೂನು ಉಲ್ಲಂಘನೆಗಾಗಿ ಗುಂಪುಗೂಡಿರುವುದು ಹೇಗಾಗುತ್ತೆ? ಒಬ್ಬರೇ ಪ್ರತಿಭಟನೆ ಮಾಡೋಕಾಗುತ್ತಾ? ಇವರು ಕಾಂಪೌಂಡ್ ಗೇಟ್ ನ ಒಳಗಡೆ ಪ್ರವೇಶಿಸಿದ್ದಾರೆ, ಮನೆಗೆ ಪ್ರವೇಶ ಮಾಡಿಲ್ಲ. ಆಗ ಪೊಲೀಸರು ಏನು ಮಾಡುತ್ತಿದ್ದರು? ತಡೆಯಬೇಕಿತ್ತು ಅಲ್ವ?
ಈಶ್ವರಪ್ಪ 144 ಸೆಕ್ಷನ್ ಹಾಕಿದಾಗ ಮೆರವಣಿಗೆ ಮಾಡಿದ್ದು ಕಾನೂನು ಉಲ್ಲಂಘನೆ ಅಲ್ಲವೇ? ಜನರಲ್ಲಿ ದ್ವೇಷ ಭಾವನೆ ಹುಟ್ಟು ಹಾಕುವ ಕೆಲಸ ಮಾಡಿದ ಈಶ್ವರಪ್ಪ ಅವರ ಮೇಲೆ ಗೃಹ ಸಚಿವರು ಏನು ಕ್ರಮ ಕೈಗೊಂಡಿದ್ದಾರೆ? ಅವರೂ ಶಿವಮೊಗ್ಗ ಜಿಲ್ಲೆಯವರೇ ಅಲ್ವಾ? ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ಬಂಧನ ಮಾಡಿಲ್ಲ ಎಂದರೆ ರಾಜ್ಯಾದ್ಯಂತ ಚಡ್ಡಿಗೆ ಬೆಂಕಿ ಹಾಕುವ ಪ್ರತಿಭಟನೆ ಮಾಡಲಾಗುವುದು ಎಂದಿದ್ದರು.
ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ…. ಲಂಕೆಯೇ ಸುಟ್ಟು ಹೋಯಿತು ….. ಕಾಂಗ್ರೇಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ … ಆ ಕೆಲಸ ನಿಮಗಿಂತ ಚನ್ನಾಗಿ ಇನ್ಯಾರು ಮಾಡಲು ಸಾಧ್ಯ …. ಚಡ್ಜಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ RSS ತಂಟೆಗೆ ಬರಬೇಡಿ…ಹುಷಾರ್#siddaramaiah
— K S Eshwarappa (@ikseshwarappa) June 4, 2022
Dont buzz about RSS, your chaddi will be on fire, warns Eshwarappa to Siddaramaiah.Targeting the Rashtriya Swayamsevak Sangh, senior Karnataka Congress leader Siddaramaiah on Friday questioned whether those who belonged to the outfit were "native Indians", "Dravidians" or "Aryans"
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm