ಬ್ರೇಕಿಂಗ್ ನ್ಯೂಸ್
22-06-22 12:04 pm HK News Desk ಕರ್ನಾಟಕ
ಬೆಳಗಾವಿ, ಜೂನ್ 22 : ಮಿದುಳು ಜ್ವರದಿಂದ ಬಳಲುತ್ತಿರುವ ನನ್ನ ಮಗುವನ್ನು ಉಳಿಸು ಎಂದು ದಂಪತಿ ತನ್ನ ಏಳೂವರೆ ವರ್ಷದ ಮಗುವನ್ನು ಶಿಲುಬೆ ಮುಂದೆ ಮಲಗಿಸಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ನಂದಗಡ ಗ್ರಾಮದ ಪಶ್ಚಿಮ ಘಟ್ಟದ ಬೆಟ್ಟದ ಮೇಲಿರುವ ಐತಿಹಾಸಿಕ ಶಿಲುಬೆ ಮುಂದೆ ದಂಪತಿ ತಮ್ಮ ಏಳೂವರೆ ವರ್ಷದ ಮಗನನ್ನು ಮಲಗಿಸಿ ಮಿದುಳು ಜ್ವರದಿಂದ ಬಳಲುತ್ತಿರುವ ನಮ್ಮ ಪುತ್ರನನ್ನು ಕಾಪಾಡು ದೇವರೇ ಎಂದು ಕಣ್ಣೀರಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಕೃಷ್ಣಾ ಮತ್ತು ಸುತ್ರಾವಿ ಎಂಬ ದಂಪತಿಯ ಪುತ್ರ ಶೈಲೇಶ್ ಕೆಲವು ತಿಂಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಹುಡುಗನನ್ನು ಹೆತ್ತವರು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ, ಶೈಲೇಶ್‍ಗೆ ಮೆದುಳು ಜ್ವರ ಇರುವುದು ಪತ್ತೆಯಾಗಿತ್ತು.

ದಂಪತಿ ತಮ್ಮ ಮಗನನ್ನು ಉಳಿಸಿಕೊಳ್ಳಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಆದರೆ ಎರಡು ತಿಂಗಳು ಕಳೆದರೂ ಗುಣಮುಖನಾಗದ ಹಿನ್ನೆಲೆ ವೈದ್ಯರು, ಮನೆಗೆ ಕರೆದುಕೊಂಡು ಹೋಗಿ. ಇವನು ಅರ್ಧ ಗಂಟೆ ಮಾತ್ರ ಬದುಕುತ್ತಾನೆ ಎಂದು ಹೇಳಿದ್ದರಂತೆ.
ಕುಟುಂಬಸ್ಥರು ಆರು ದಿನ ಮನೆಯಲ್ಲಿ ಶೈಲೇಶ್‍ನನ್ನು ಇಟ್ಟುಕೊಂಡು ನಂದಗಡಕ್ಕೆ ಬಂದಿದ್ದಾರೆ. ಶಿಲುಬೆ ಎದುರು ಮಗುವನ್ನು ಮಲಗಿಸಿ ನನ್ನ ಮಗನನ್ನು ಬದುಕಿಸಿಕೊಡುವಂತೆ ದೇವರ ಮೊರೆ ಹೋಗಿದ್ದಾರೆ. ನಂತರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಗುವನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
Belagavi Parents surrender child suffering from Brain fever before the historical holy cross that is set up on a high mountain for healing.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm