ಬ್ರೇಕಿಂಗ್ ನ್ಯೂಸ್
28-06-22 07:49 pm HK News Desk ಕರ್ನಾಟಕ
ಕಾರವಾರ, ಜೂನ್ 28 : ಒಂದೆಡೆ ಅಗ್ನಿಪಥ್ ಯೋಜನೆಯ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೇ ವೇಳೆ, ಮತ್ತೊಂದೆಡೆ ದೇಶದ ರಕ್ಷಣಾ ಪಡೆಗಳು ಅಗ್ನಿಪಥ್ ಪ್ರಕಾರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಿವೆ. ಆಕಾಂಕ್ಷಿಗಳು ಅರ್ಜಿ ಸಲ್ಲಿಸುವುದನ್ನೂ ಆರಂಭಿಸಿದ್ದಾರೆ.
ಇದೇ ವೇಳೆ, ಕರ್ನಾಟಕ ಸರಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹೊಸತಾಗಿ ಸೈನಿಕ ತರಬೇತಿ ಶಾಲೆಯನ್ನು ಆರಂಭಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿಗಾಗಿ ಸೈನಿಕ ತರಬೇತಿ ಶಾಲೆಗಳನ್ನು ಆರಂಭಿಸುತ್ತಿದೆ. ಈ ಶಾಲೆಗಳಲ್ಲಿ ಆಕಾಂಕ್ಷಿ ಯುವಕರಿಗೆ ಉಚಿತ ತರಬೇತಿ ನೀಡಲಾಗುತ್ತದೆ.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಆಕಾಂಕ್ಷಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ ಸಲುವಾಗಿ ಕರಾವಳಿ ಜಿಲ್ಲೆಗಳಲ್ಲಿ ತರಬೇತಿ ಶಾಲೆ ಆರಂಭಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದ್ದು ಈ ಸಂಬಂಧ ಆದೇಶವನ್ನೂ ಹೊರಡಿಸಲಾಗಿದೆ. ಇನ್ನೊಂದು ತಿಂಗಳಲ್ಲೇ ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನುವ ಮಾಹಿತಿಗಳಿವೆ.
ಸೈನಿಕ ತರಬೇತಿ ಶಾಲೆಗಳಿಗೆ ಸ್ಥಳೀಯ ಸ್ವತಂತ್ರ ಹೋರಾಟಗಾರರು, ವೀರ ಪುರುಷರ ಹೆಸರನ್ನಿಡಲು ಸರಕಾರ ನಿರ್ಧರಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಶಾಲೆಗೆ ಬ್ರಿಟಿಷರ ವಿರುದ್ಧ ಹೋರಾಡಿದ ಹೆಂಜಾ ನಾಯ್ಕ, ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗೆ ವೀರರಾಣಿ ಅಬ್ಬಕ್ಕ ಹೆಸರಿಡಲಾಗುವುದು. ಶಾಲೆ ಪ್ರಾರಂಭಿಸಲು ಆಯಾ ಜಾಗದಲ್ಲಿ ಸೂಕ್ತ ಸ್ಥಳವನ್ನ ಶೋಧ ಮಾಡಲಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇನೆ, ಇನ್ನಿತರ ಭದ್ರತಾ ವಿಭಾಗದ ಸೇವೆಗಳಿಗೆ ಸೇರಲು ಪ್ರೋತ್ಸಾಹಿಸುವುದಕ್ಕಾಗಿ ತರಬೇತಿ ಶಾಲೆಯನ್ನು ಆರಂಭಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳು ಈ ಶಾಲೆಗಳಿಗೆ ಉಚಿತ ತರಬೇತಿಗೆ ಸೇರಬಹುದಾಗಿದ್ದು ಇದಕ್ಕೆ ತಗಲುವ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭರಿಸಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರದಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವಕರಿಗೆ ಹೆಚ್ಚು ಅನುಕೂಲವಾಗಲಿದೆ' ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರಿನಿವಾಸ್ ಪೂಜಾರಿ ಹೇಳಿದ್ದಾರೆ.
Agneepath Recruitment free training school to open in Karavali regions for aspirants.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am