ಬ್ರೇಕಿಂಗ್ ನ್ಯೂಸ್
19-07-22 10:00 pm HK News Desk ಕರ್ನಾಟಕ
ಹಾಸನ, ಜುಲೈ 19: ಆನೆಯನ್ನು ಕೊಂದು ಹೂತು ಹಾಕಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಗಳ ರಕ್ಷಣೆಗೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ಆರೋಪಿತ ಅರಣ್ಯಾಧಿಕಾರಿಗಳನ್ನು ಗುರಿಯಾಗಿಸಿ ವಿಜಿಲೆನ್ಸ್ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಸಂಸದೆ ಮನೇಕಾ ಗಾಂಧಿ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ವಿದ್ಯುತ್ ಹರಿಸಿ ಆನೆಯನ್ನು ಕೊಂದು ಹಾಕಿದ್ದಲ್ಲದೆ, ಅದರ ದಂತವನ್ನು ತೆಗೆದು ಮಾರಾಟಕ್ಕೆ ಯತ್ನಿಸಲಾಗಿತ್ತು. ಮಾರ್ಚ್ 19ರಂದು ಬೆಂಗಳೂರಿನ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ದಂತ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಆಮೂಲಕ ಆನೆಯನ್ನು ಕೊಂದಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.

ಆದರೆ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು ಒಟ್ಟು ಕೃತ್ಯವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಸ್ಥಳೀಯ ಅರಣ್ಯಾಧಿಕಾರಿಗಳು ಕೃತ್ಯದಲ್ಲಿ ಶಾಮೀಲಾಗಿದ್ದು, ಆರೋಪಿಗಳ ರಕ್ಷಣೆಗೆ ಹಾಸನ ಅರಣ್ಯ ಇಲಾಖೆಯ ಆರ್ ಎಫ್ ಓ ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ಪ್ರಕರಣ ಹಸ್ತಾಂತರಿಸಲು ಒತ್ತಡ ಹೇರುತ್ತಿದ್ದಾರೆ.


ಆರೋಪಿಗಳು ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರಾಗಿದ್ದು, ಸಂಸದರು ಅವರ ರಕ್ಷಣೆಗೆ ನಿಂತಿದ್ದಾರೆ. ಪ್ರಕರಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮುತುವರ್ಜಿ ವಹಿಸಬೇಕು. ಪ್ರಕರಣವನ್ನು ಹಾಸನ ಅರಣ್ಯ ಇಲಾಖೆಯಿಂದ ಪಡೆದು ವಿಜಿಲೆನ್ಸ್ ತನಿಖೆಗೆ ಒಪ್ಪಿಸಬೇಕು ಎಂದು ಮನೇಕಾ ಗಾಂಧಿ ಜುಲೈ 18ರಂದು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
Animal rights activist Maneka Gandhi, MP, has written to Chief Minister Basavaraj Bommai seeking a probe into the electrocution of a tusker, which came to light early this year in Hassan.Ms. Gandhi has alleged that a Range Forest Officer (RFO) in Hassan was trying to protect the accused in the case, buckling under pressure from Prajwal Revanna, MP.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm