ಬ್ರೇಕಿಂಗ್ ನ್ಯೂಸ್
24-07-22 01:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24 : ಗಾಂಜಾ ಗ್ಯಾಂಗ್ ಬೆನ್ನತ್ತಿ ಆಂಧ್ರ ಪ್ರದೇಶಕ್ಕೆ ತೆರಳಿದ್ದ ಶಿವಾಜಿನಗರ ಠಾಣೆ ಪೊಲೀಸರ ಕಾರು ಚಿತ್ತೂರಿನ ಬಳಿ ಅಪಘಾತಕ್ಕೀಡಾಗಿದ್ದು ಪಿಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿಯ ಇನ್ನೋವಾ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿ ಸುಮಾರು 30 ಅಡಿ ತಗ್ಗಿನಲ್ಲಿದ್ದ ಮತ್ತೊಂದು ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಇದರಿಂದ ತೀವ್ರ ಗಾಯಗೊಂಡ ಮೂವರು ಪೊಲೀಸ್ ಸಿಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಶಿವಾಜಿನಗರ ಠಾಣೆಯ ಪಿಎಸ್ಐ ಅವಿನಾಶ್, ಪ್ರೊಬೇಷನರಿ ಪಿಎಸ್‌ಐ ದೀಕ್ಷಿತ್, ಪೊಲೀಸ್ ಕಾನ್ಸ್ಟೇಬಲ್ ಅನಿಲ್ ಸೇರಿ ಆರು ಸಿಬಂದಿಯ ತಂಡವು ಖಾಸಗಿ ಏಜನ್ಸಿಯಿಂದ ಇನ್ನೋವಾ ಕಾರನ್ನು ಬಾಡಿಗೆ ಪಡೆದು ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರಕ್ಕೆ ತೆರಳಿದ್ದರು. ನಸುಕಿನ ಜಾವ 3 ಗಂಟೆ ಸುಮಾರಿಗೆ ತಂಡವೊಂದನ್ನು ಬೆನ್ನಟ್ಟುವ ಧಾವಂತದಲ್ಲಿ ಪೊಲೀಸರ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದೆ ಎನ್ನಲಾಗುತ್ತಿದೆ.

ಸಬ್ ಇನ್ಸ್‌ಪೆಕ್ಟರ್ ಅವಿನಾಶ್, ಕಾನ್ಸ್ಟೇಬಲ್ ಅನಿಲ್ ಹಾಗೂ ಖಾಸಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್‌ಐ ದೀಕ್ಷಿತ್, ಕಾನ್ಸ್ಟೇಬಲ್ ಶರಣಬಸವ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಹೊರಟಿದ್ದ ಪೊಲೀಸರ ತಂಡ ಚಿತ್ತೂರಿನಲ್ಲಿ ಆರೋಪಿಗಳು ಸಿಗದ ಹಿನ್ನೆಲೆಯಲ್ಲಿ ತಿರುಪತಿಯತ್ತ ಹೊರಟಿತ್ತು. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇತ್ತ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಸಹೋದ್ಯೋಗಿಗಳ ದಾರುಣ ಸಾವು ಹಿನ್ನಲೆಯಲ್ಲಿ ನೀರವ ಮೌನ ಆವರಿಸಿದೆ.
Bangalore Shivajinagara police meet with a ghastly accident in Andhra by chasing Ganja Gang at Andhra, three dead on spot including Police Sub Inspector.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm