ಬ್ರೇಕಿಂಗ್ ನ್ಯೂಸ್
26-07-22 10:43 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 26 : ಪದೇ ಪದೇ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿಕೆ ನೀಡಿ ಪಕ್ಷದ ನಾಯಕರಲ್ಲಿ ಮುಜುಗರ ಸೃಷ್ಟಿಸಿದ್ದ ಶಾಸಕ ಜಮೀರ್ ಅಹ್ಮದ್ ಗೆ ಕಾಂಗ್ರೆಸ್ ಹೈಕಮಾಂಡ್ ಚಾಟಿ ಬೀಸಿದೆ. ನೀವು ಪಕ್ಷದ ಶಿಸ್ತು ಮತ್ತು ಸಿದ್ಧಾಂತದ ಲಕ್ಷ್ಮಣ ರೇಖೆಯನ್ನು ಮೀರಿದ್ದೀರಿ. ಮುಂದಿನ ದಿನಗಳಲ್ಲಿ ಬಹಿರಂಗ ಹೇಳಿಕೆ ನೀಡುವಾಗ ಜಾಗ್ರತೆಯಿಂದಿರಿ. ಪಕ್ಷದ ತತ್ವ, ಸಿದ್ಧಾಂತಕ್ಕೆ ಬದ್ಧರಾಗಿರಿ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಚ್ಚರಿಕೆ ನೀಡಿದ್ದಾರೆ.
ಜಮೀರ್ ಅಹ್ಮದ್ ಅವರಿಗೆ ಪತ್ರ ಬರೆದು ಎಚ್ಚರಿಕೆ ನೀಡಿರುವ ಸುರ್ಜೇವಾಲಾ, ನಿಮ್ಮ ಇತ್ತೀಚಿನ ಹೇಳಿಕೆಗಳು ಕೆಟ್ಟ ಅಭಿರುಚಿಯಿಂದ ಕೂಡಿವೆ. ಅನುಭವಿ ನಾಯಕರಿಂದ ಈ ರೀತಿಯ ವರ್ತನೆ ಸರಿಯಲ್ಲ. ಅನವಶ್ಯಕ ಮತ್ತು ಸಂಕುಚಿತ ಸ್ವಭಾವದ ಹೇಳಿಕೆಗಳು ವಿವಾದಕ್ಕೆ ಕಾರಣವಾಗುತ್ತದೆ. ಅನಗತ್ಯ ಹೇಳಿಕೆಗಳು ತಪ್ಪು ಸಂದೇಶವನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.


ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಜಮೀರ್ ಅಹ್ಮದ್ ನೀಡುತ್ತಿರುವ ಸಿದ್ದರಾಮಯ್ಯ ಪರ ಹೇಳಿಕೆಗಳು ಪಕ್ಷದಲ್ಲಿ ಒಡಕು ಮೂಡಲು ಕಾರಣವಾಗಿತ್ತು. ಇದೇ ವಿಚಾರ ಭಾರೀ ಸದ್ದು ಮಾಡುತ್ತಿದ್ದಂತೆ ಎಚ್ಚತ್ತುಕೊಂಡ ಪಕ್ಷದ ಹೈಕಮಾಂಡ್, ಜಮೀರ್ ಅಹ್ಮದ್ ಮಾತಿಗೆ ಬ್ರೇಕ್ ಹಾಕಿದೆ. ಹೋದಲ್ಲಿ ಬಂದಲ್ಲಿ ತನ್ನ ಸ್ವಂತ ಅಭಿಪ್ರಾಯ ಎಂದು ಜಮೀರ್, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿಕೊಂಡು ತಿರುಗಿದ್ದು ಪಕ್ಷದ ಒಳಗಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಲ್ಲರಿಗೂ ಅವಕಾಶ ನೀಡಿದ್ದೀರಿ. ನನಗೂ ಒಂದು ಅವಕಾಶ ನೀಡಿ ಎಂದು ಹೇಳಿ ಮುಖ್ಯಮಂತ್ರಿ ಆಗುವ ಇಂಗಿತ ಹೊರಹಾಕಿದ್ದರು. ಡಿಕೆಶಿ ಹೇಳಿಕೆ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಚರ್ಚೆ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಜಮೀರ್ ಅಹ್ಮದ್, ಒಕ್ಕಲಿಗರಿಗಿಂತ ನಮ್ಮ ಮುಸ್ಲಿಂ ಸಮುದಾಯ ದೊಡ್ಡದಿದೆ. ಒಂದೇ ಸಮುದಾಯ ನಂಬಿಕೊಂಡು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಸಮುದಾಯ ಆಧಾರದಲ್ಲಿ ಸಿಎಂ ಕೊಡುವುದಾದರೆ ನಾನು ಕೂಡ ಆಕಾಂಕ್ಷಿ. ನನಗೂ ಆಸೆಯಿದೆ. ನಾನ್ಯಾಕೆ ಸಿಎಂ ಆಗಬಾರದು ಎಂದು ಹೇಳುವ ಮೂಲಕ ಡಿಕೆಶಿಗೆ ಟಾಂಗ್ ಇಟ್ಟಿದ್ದರು. ಈ ಮಾತು ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿತ್ತು.
Amid the power struggle in the Karnataka unit of the Congress Party on the Chief Ministerial candidate, the statement of MLA Zameer Ahmed ad Khan on KPCC president DK Shivakumar and the Vokkalliga community has riled many in the state and landed him into trouble. A warning notice has been issued against him by the All India Congress Committee.After many Congress leaders, BJP leaders, and Vokkalliga community members expressed their displeasure about Khan's statement, the All Indian Congress Committee, issued a warning to Khan to be careful while making public statements and to adhere to the discipline and the ideology of the INC.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm