ಬ್ರೇಕಿಂಗ್ ನ್ಯೂಸ್
29-07-22 03:56 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ.
ಈ ಪ್ರಕರಣವು ಅಂತರರಾಜ್ಯ ನಂಟು ಹೊಂದಿರುವ ಹಿನ್ನೆಲೆಯಲ್ಲಿ ತನಿಖೆಯ ಹೊಣೆಯನ್ನು ಎನ್ಐಎಗೆ ವಹಿಸಲು ಕರ್ನಾಟಕ ಸರ್ಕಾರವು ತೀರ್ಮಾನ ಮಾಡಿದೆ. ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಈ ನಿರ್ಧಾರ ತೆಗೆದುಕೊಂಡರು.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚಿಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ರಾಜ್ಯ ಮೀಸಲು ಪಡೆಯ (KSRP) ಬೆಟಾಲಿಯನ್ ನಿಯೋಜಿಸಲಾಗುವುದು. ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಫಾಜಿಲ್ ಕೊಲೆ ಪ್ರಕರಣದ ತನಿಖೆಗೂ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿದೆ. ಆ ಪ್ರಕರಣದ ತನಿಖೆಯೂ ಚುರುಕಾಗಿದೆ ಎಂದರು. ಶೀಘ್ರದಲ್ಲೇ ಎಲ್ಲ ಸಮುದಾಯದ ಮುಖಂಡರ ಜತೆ ಶಾಂತಿ ಸಭೆ ನಡೆಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡುತ್ತೇವೆ ಎಂದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತು ಡಿಐಜಿ ಜೊತೆಗೆ ಚರ್ಚಿಸಿದ್ದೇನೆ. ಇದು ಸಂಘಟಿತ ಅಪರಾಧ ಮತ್ತು ಬೇರೆ ರಾಜ್ಯದವರು ಪಾಲ್ಗೊಂಡಿರುವ ಶಂಕೆಯಿದೆ. ಅಗತ್ಯ ಮಾಹಿತಿ ಕಲೆಹಾಕಿದ ಮೇಲೆ ಕೇರಳ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ. ತನಿಖೆಯ ಹೊಣೆಯನ್ನು ಎನ್ಐಎಗೆ ವಹಿಸುತ್ತಿದ್ದೇವೆ ಎಂದರು.
ಭಯೋತ್ಪಾದಕ ಕೃತ್ಯಗಳ ತನಿಖೆಯ ಹೊಣೆಯನ್ನು ಅದರ ತೀವ್ರತೆ ವಿಶ್ಲೇಷಿಸಿ ಎನ್ಐಎಗೆ ವಹಿಸುವುದು ವಾಡಿಕೆ. 2008ರಲ್ಲಿ ಮುಂಬೈ ಮೇಲೆ ಭಯೋತ್ಪಾದಕರ ದಾಳಿಯ ನಂತರ ಎನ್ಐಎ ರಚಿಸಲಾಯಿತು. ಭಯೋತ್ಪಾದನಾ ಪ್ರಕರಣಗಳ ತ್ವರಿತ ತನಿಖೆ ಮತ್ತು ಭಯೋತ್ಪಾದಕರ ಮೇಲೆ ಕಣ್ಣಿಡುವುದು ಎನ್ಐಎ ಸಿಬ್ಬಂದಿಯ ಮುಖ್ಯ ಜವಾಬ್ದಾರಿ.
ಇದೀಗ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನೂ ಎನ್ಐಎ ತನಿಖೆಗೆ ವಹಿಸಲಾಗಿದೆ. ಪ್ರವೀಣ್ ಹತ್ಯೆಯ ಹಿಂದೆ ಇರುವ ಸಂಘಟನೆಗಳ ಕೈವಾಡದ ಬಗ್ಗೆ ಈ ತನಿಖೆಯ ನಂತರ ಮಾಹಿತಿ ಸಿಗಲಿದೆ. ಪ್ರಕರಣ ಸಂಬಂಧ ಈಗಾಗಲೇ ಕರ್ನಾಟಕ ಪೊಲೀಸರು ಬಂಧಿಸಿರುವ ಅಥವಾ ವಶಕ್ಕೆ ಪಡೆದುಕೊಂಡಿರುವ ವ್ಯಕ್ತಿಗಳನ್ನೂ ಮುಂದಿನ ದಿನಗಳಲ್ಲಿ ಎನ್ಐಎ ಸಿಬ್ಬಂದಿ ತಮ್ಮ ವಶಕ್ಕೆ ಪಡೆಯಲಿದ್ದಾರೆ.
ಕರ್ನಾಟಕದಲ್ಲಿಯೂ ಎನ್ಐಎ ಶಾಖೆ ತೆರೆಯಲು ಕಳೆದ ಜನವರಿಯಲ್ಲಿ ಗೃಹ ಇಲಾಖೆ ಒಪ್ಪಿಗೆ ಸೂಚಿಸಿತ್ತು. ಈ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದರು.
The Karnataka government handed over the investigation of BJP Yuva Morch member Praveen Nettaru's murder in the state's Dakshina Kannada district to the National Investigation Agency (NIA) on Friday. In his early 30s, Nettaru was brutally hacked to death in Bellare by Kerala-registered bike-borne assailants with a machete when he was returning home after completing his business for the day and shutting his poultry shop in the same area.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm