ಬ್ರೇಕಿಂಗ್ ನ್ಯೂಸ್
02-08-22 10:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 2: ಒಂದೆಡೆ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡಿದ್ದರೆ, ಮತ್ತೊಂದೆಡೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ, ರಾಜ್ಯ ಬಿಜೆಪಿ ನಾಯಕರ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇಂಥ ಹೊತ್ತಲ್ಲೇ ಗೃಹ ಸಚಿವ ಅಮಿತ್ ಷಾ ದಿಢೀರ್ ಆಗಿ ರಾಜ್ಯಕ್ಕೆ ಬರುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದನ್ನು ದೃಢ ಪಡಿಸಿದ್ದಾರೆ. ಆಗಸ್ಟ್ 4ರಂದು ಬೆಂಗಳೂರಿನ ಖಾಸಗಿ ಹೋಟಲ್‌ನಲ್ಲಿ ನಡೆಯಲಿರುವ 'ಸಂಕಲ್ಪದಿಂದ ಸಿದ್ಧಿ' (ಸಂಕಲ್ಪ್ ಸೇ ಸಿದ್ಧಿ) ಸಮಾವೇಶದ ಮೂರನೇ ಆವೃತ್ತಿಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಅವರು ಬುಧವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದಿದ್ದಾರೆ.

ಕೇಂದ್ರ ಸಚಿವಾಲಯದ ಮಾಹಿತಿ ಪ್ರಕಾರ, ಬುಧವಾರ ರಾತ್ರಿ 8 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ ಹೊರಟು ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರು ಎಚ್‌ಎಎಲ್ ನಿಲ್ದಾಣ ತಲುಪಲಿದ್ದಾರೆ. ನಂತರ ರೇರ್ಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟೆಂಡ್ ನಲ್ಲಿ ತಂಗಲಿದ್ದಾರೆ. ಮರುದಿನ ಬೆಳಗ್ಗೆ 11 ಗಂಟೆಯ ಕಾರ್ಯಕ್ರಮ ಮುಗಿಸಿ ಸಂಜೆ ವೇಳೆಗೆ ದೆಹಲಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಇದೆ. ಇದರ ನಡುವೆಯೇ, ರಾಜ್ಯ ಬಿಜೆಪಿ ಮತ್ತು ಕಾರ್ಯಕರ್ತರ ಆಕ್ರೋಶದ ಬಗ್ಗೆ ಅಮಿತ್ ಷಾ ವರದಿ ಪಡೆದುಕೊಳ್ಳಲಿದ್ದು ಒಂದೇ ವಾರದಲ್ಲಿ ಆ್ಯಕ್ಷನ್ ತಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್ ಅಂಗಳದಲ್ಲಿದ್ದು ಯಾವ ನಿರ್ಧಾರ ತಗೊಳ್ತಾರೆ ಎಂಬ ಕುತೂಹಲ ಎದ್ದಿದೆ.
Amit Shah to visit Bangalore on August 6th, chances of surgery in BJP party.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm