ಬ್ರೇಕಿಂಗ್ ನ್ಯೂಸ್
05-08-22 12:20 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 5: ಮಡಿಕೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ಮಡಿಕೇರಿಯ ಚೆಂಬು, ಗಾಳಿಬೀಡು, ಜೋಡುಪಾಲ, ಸಂಪಾಜೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ಅಲ್ಲಿನ ನಿವಾಸಿಗಳು ಮತ್ತೆ ದುರಂತ ಮರುಕಳಿಸುತ್ತಾ ಎನ್ನುವ ಆತಂಕಕ್ಕೆ ಒಳಗಾಗಿದ್ದಾರೆ.
ಮಳೆಯಿಂದಾಗಿ ಚೆಟ್ಟಿಮಾನಿ, ಮಾರ್ಪಡ್ಕ ಗ್ರಾಮಗಳಲ್ಲಿ ಸೇತುವೆಗಳು ಕೊಚ್ಚಿ ಹೋಗಿವೆ. ಸಂಪಾಜೆ, ಚೆಂಬು, ಕರಿಕೆ, ಕೊಯನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಹಲವೆಡೆ ರಸ್ತೆ ಕುಸಿದು ಹೋಗಿದೆ. ಚೆಂಬು, ಗೂನಡ್ಕ, ದಬ್ಬಡ್ಕ ಭಾಗದಲ್ಲಿ ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಲ್ಲುಗುಂಡಿ - ಚೆಟ್ಟಿಮಾನಿ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಸೇತುವೆ ಬಿರುಕು ಬಿಟ್ಟಿದ್ದರಿಂದ ಚೆಟ್ಟಿಮಾನಿಯ 60 ಕುಟುಂಬಗಳ ಜನರು ಸುಮಾರು 13 ಕಿಲೋ ಮೀಟರ್ ನಡೆದುಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಭಾಗಮಂಡಲ ಕರಿಕೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತವಾಗಿದೆ. ಭಾಗಮಂಡಲದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕುಸಿತವಾಗಿದ್ದು ಗುರುವಾರ ಇಡೀ ದಿನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬೆಟ್ಟದ ಮೇಲ್ಭಾಗದಲ್ಲಿ ಭಾರೀ ಭೂಕುಸಿತವಾಗಿದ್ದು, ಬೃಹತ್ ಗಾತ್ರದ ಬಂಡೆ, ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
Madikeri heavy rains sampaje people in great fear.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm