ಬ್ರೇಕಿಂಗ್ ನ್ಯೂಸ್
08-08-22 07:21 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8 : ಮೊನ್ನೆಯಷ್ಟೇ ತಾಯಿಯೇ ಮಗುವನ್ನು ಮಹಡಿಯಿಂದ ತಳ್ಳಿ ಕೊಲೆಗೈದ ಭೀಭತ್ಸ ಘಟನೆ ನಡೆದಿತ್ತು. ಈಗ ವೃತ್ತಿಯಲ್ಲಿ ವೈದ್ಯೆಯಾಗಿದ್ದ ಮಹಿಳೆಯೊಬ್ಬರು ತನ್ನ ಹತ್ತು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ಬೆಳಕಿಗೆ ಬಂದಿದೆ.
ಸೈಮಾ ಮುತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಮಗಳು ಆರಾಧನಾಳನ್ನು ನೇಣಿಗೆ ಹಾಕಿಸಿ, ಹತ್ಯೆಗೈದ ಬಳಿಕ ಸೈಮಾ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪ್ರಸ್ತುತ ಪೊಲೀಸರು ಸೈಮಾ ಪತಿ ಕೋಲಾರ ಮೂಲದ ವೈದ್ಯ ನಾರಾಯಣ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಮೂಲದ ಸೈಮಾ ಮುತ್ತಪ್ಪ ಹತ್ತು ವರ್ಷಗಳ ಹಿಂದೆ ಪರಿಚಯ ಆಗಿದ್ದ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ಡೆಂಟಲ್ ಡಾಕ್ಟರ್ ಆಗಿದ್ದರು. ನಾರಾಯಣ್ ಮತ್ತು ಸೈಮಾ ಇಬ್ಬರೂ ಸೇರಿ ಬೆಂಗಳೂರಿನಲ್ಲಿ ಒಟ್ಟಿಗೆ ಕ್ಲಿನಿಕ್ ನಡೆಸುತ್ತಿದ್ದರು. ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಪತಿ ನಾರಾಯಣ್ ಮನೆಗೆ ಬಂದು ನೋಡಿದಾಗಲೇ ಕೃತ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಆಸ್ಟ್ರೇಲಿಯಾದಲ್ಲಿದ್ದ ಸೈಮಾ ಸಹೋದರ ಬೆಂಗಳೂರಿಗೆ ಬಂದಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶೈಮಾ ಕೊಡಗಿನ ಗೌಡ್ತಿಯಾಗಿದ್ದು ಈಕೆ ಪ್ರೀತಿಸಿ ಬೇರೊಬ್ಬರನ್ನು ಮದುವೆಯಾಗುವುದು ಮನೆಯವರಿಗೆ ಇಷ್ಟವಿರಲಿಲ್ಲ. ಆದರೆ, ಮನೆಯವರನ್ನು ಒಪ್ಪಿಸಿ ಆಕೆಯೇ ಮುಂದೆ ನಿಂತು ಮದುವೆಯಾಗಿದ್ದಳು. ಇವರ ದಾಂಪತ್ಯಕ್ಕೆ ಹೆಣ್ಣು ಮಗುವಾಗಿದ್ದು ಬೆಳೆದು ನಿಂತಿದ್ದಳು. ಸಾವಿನ ಬಗ್ಗೆ ಭಾರೀ ಅನುಮಾನಗಳಿದ್ದು ತಾಯಿಯೇ ಹತ್ತು ವರ್ಷದ ಮಗಳನ್ನು ಸಾಯಿಸಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಪೊಲೀಸರು ಗಂಡನನ್ನು ಗುರಿಯಾಗಿಸಿ ತನಿಖೆ ನಡೆಸುತ್ತಿದ್ದಾರೆ.
Dentist from Kodagu commits suicide by killing her 10 year old daughter in Bangalore. The deceased has been identified as Saima Muttappa and her daughter Aradana. It is said she had married the person whom she loved. The reason for their suicide is still not known.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm