ಬ್ರೇಕಿಂಗ್ ನ್ಯೂಸ್
16-08-22 12:58 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕರ್ನಾಟಕದಲ್ಲಿ ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗದ ಬೆಳವಣಿಗೆಗಳನ್ನು ವಿವರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ನಾನು ಎಲ್ಲ ಮುಸ್ಲಿಮರೂ ಗೂಂಡಾಗಳು ಎಂದು ಹೇಳುವುದಿಲ್ಲ. ಆದರೆ ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಪಕ್ಷಗಳು ಹಿಂದೂ-ಮುಸ್ಲಿಂ ಗಲಭೆ ತಂದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಇದು ಎಂದಿಗೂ ಈಡೇರುವುದಿಲ್ಲ. ಶಿವಮೊಗ್ಗದಲ್ಲಿ ಸ್ಥಳೀಯ ಹಿಂದೂ-ಮುಸ್ಲಿಮರು ಅಣ್ಣತಮ್ಮಂದಿರಂತೆ ಬಾಳುತ್ತಿದ್ದಾರೆ. ಆದರೆ ಕೇರಳ ಮತ್ತು ಇತರ ರಾಜ್ಯಗಳಿಂದ ಬರುವ ಎಸ್ಡಿಪಿಐ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಗಲಭೆ ಹಬ್ಬಿಸಲು ಯತ್ನಿಸುತ್ತಿದ್ದಾರೆ. ಇದು ಎಂದಿಗೂ ಯಶಸ್ವಿಯಾಗುವುದಿಲ್ಲ. ಶಿವಮೊಗ್ಗ ಗಲಭೆಗೆ ಕಾಂಗ್ರೆಸ್ ಕಾರ್ಪೊರೇಟರ್ ಗಂಡನೇ ಕಾರಣ. ಬಿಜೆಪಿ ಮೇಲೆ ಅರೋಪ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ನಗರದಲ್ಲಿ ಸರ್ಕಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ನಂತರ ನಡೆದ ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಾಕಷ್ಟು ಜನರು ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಎಲ್ಲರೂ ಮನೆಗಳಿಗೆ ಹೋದೆವು. ಅಷ್ಟರೊಳಗೆ ಕೆಲ ಕಿಡಿಗೇಡಿಗಳು ಸಾರ್ವಕರ್ ಪೋಟೊ ಹರಿದು ಹಾಕಿದ್ದರು. ಎಸ್ಡಿಪಿಐ ಕಾರ್ಯಕರ್ತರ ಈ ಕೃತ್ಯದಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿತು ಎಂದು ಹೇಳಿದರು.

ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಪ್ರೇಮಸಿಂಗ್ ಹಾಗೂ ಶರವಣ ಹೋಗುತ್ತಿರುವಾಗ ಸುಮಾರು ಆರು ಮಂದಿ ಮುಸ್ಲಿಂ ಗುಂಡಾಗಳು ಪ್ರೇಮ್ ಸಿಂಸ್ಗೆ ಚಾಕು ಹಾಕಿದರು. ಅವರ ನರಗಳು ಘಾಸಿಯಾಗಿರುವುದರಿಂದ ಉಳಿಯುವುದು ಕಷ್ಟ ಎನ್ನುತ್ತಿದ್ದಾರೆ. ಪೊಲೀಸರು ಬಹಳ ಶ್ರಮದಿಂದ ಅಪರಾಧಿಗಳನ್ನು ಹುಡುಕುತ್ತಿದ್ದಾರೆ. ಈ ವೇಳೆ ಒಬ್ಬನ ಮೇಲೆ ಗುಂಡು ಹಾರಿಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂದು ವಿವರಿಸಿದರು.
KS Eshwarappa, BJP MLA from Karnataka, on Tuesday warned the Muslims to take action against youth of the community involved in anti-national activities in Shivamogga. He further said that the activities won't survive if the Hindu society rises. The lawmaker's statement came a day after a 20-year-old man, Prem Singh, was stabbed when clashes broke out between two communities in the town over putting up banners of Hindutva ideologue Veer Savarkar and 18th century Mysuru ruler Tipu Sultan on Independence Day (15 August, 2022).
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:20 pm
HK News Desk
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm