ಬ್ರೇಕಿಂಗ್ ನ್ಯೂಸ್
16-08-22 05:37 pm HK News Desk ಕರ್ನಾಟಕ
ರಾಯಚೂರು, ಆಗಸ್ಟ್ 16: ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಈಚರ್ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸವರಾಜ್ ಮಾಸಳಿ(40), ಬಸವರಾಜ್ರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಮೃತ ದುರ್ದೈವಿಗಳು.
ಮೃತರೆಲ್ಲರೂ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳು. ಸಂಬಂಧಿಕರೊಬ್ಬರು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಈ ಮೂವರು ಒಂದೇ ಬೈಕ್ನಲ್ಲಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದರು. ಮಾರ್ಗಮಧ್ಯೆ ಈಚರ್ ಲಾರಿ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ. ರಾಯಚೂರು ಮಾರ್ಗವಾಗಿ ಹೊರಟಿದ್ದ ಈಚರ್ ವಾಹನ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆಬದಿಯ ಜಮೀನಿನತ್ತ ನುಗ್ಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಶವಗಳು ರಸ್ತೆ ಬದಿಯ ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಬೆಚ್ಚಿಬೀಳಿಸುವಂತಿತ್ತು.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Family of Three killed after a major accident on their way to attend the funeral in Raichur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm