ಬ್ರೇಕಿಂಗ್ ನ್ಯೂಸ್
18-08-22 12:40 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18 : ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿಯಾಗಿ ನೋಡಬೇಕು ಎನ್ನುವ ಮೂಲಕ ರಾಜ್ಯ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದ್ದ ಸಮಾಜ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲುಗೆ ರಾಜ್ಯ ಬಿಜೆಪಿ ವಿವರಣೆ ಕೇಳಿದೆ ಎನ್ನಲಾಗುತ್ತಿದೆ.
ಇದರ ನಡುವಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲನ್ನು ಭೇಟಿಯಾದ ಸಚಿವ ಶ್ರೀರಾಮುಲು ಸ್ಪಷ್ಟೀಕರಣ ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತಮ್ಮ ಹೇಳಿಕೆಯ ಬಗ್ಗೆ ರಾಜ್ಯಾಧ್ಯಕ್ಷರಿಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಡಿಕೆಶಿ, ಅವರ ನಡುವಿನ ಜಗಳದ ವಿಚಾರದಲ್ಲಿ ಹಾಗೆ ಹೇಳಿದ್ದೇನೆ. ನಮ್ಮ ಪಕ್ಷಕ್ಕೆ ಬರಲಿ ಅಂತ ಹೇಳಿದ್ದಾಗಿ ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮುಲು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಮೋದಿ ಬಂದಾಗ ವಿರೋಧ ಮಾಡಿದ್ದವರೂ ಬಿಜೆಪಿಗೆ ಬಂದಿದ್ದಾರೆ. ಹಿಂದುಳಿದ ಜಾತಿಗಳು ಒಂದಾಗಬೇಕು. ಹಿಂದುಳಿದ ಜಾತಿಗಳನ್ನು ಒಗ್ಗೂಡಿಸುವ ಕೆಲಸ ಪ್ರಧಾನಿ ಮಾಡುತ್ತಿದ್ದಾರೆ. ಇತ್ತೀಚಿನ ಬೆಳವಣಿಗೆ ನೋಡಿದ್ರೆ ಕಾಂಗ್ರೆಸ್ ನಲ್ಲಿ ಕಿರಿ ಕಿರಿ ಕಾಣುತ್ತಿದೆ. ಅದನ್ನು ನೋಡಿದರೆ ಮುಂದೊಂದು ದಿನ ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರೆ ಅನ್ನುವ ಭಾವನೆಯಿಂದ ಮಾತನಾಡಿದ್ದೆ ಎಂದಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೋಗಲು ವಿಳಂಬವಾದ ಕಾರಣಕ್ಕೆ ಸಿದ್ದರಾಮಯ್ಯ ಅಲ್ಲಿ ಅಲ್ಪ ಮತದಲ್ಲಿ ಜಯ ಗಳಿಸಿದ್ದರು. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನಾನು ಬಿಜೆಪಿಯ ಶಿಸ್ತಿನ ಸಿಪಾಯಿ. ಯಾರಿಗೋ ಹೆದರಿಕೊಂಡು ರಾಜಕೀಯ ಮಾಡುವ ಜಾಯಮಾನ ನನ್ನದಲ್ಲ ಎಂದು ಶ್ರೀರಾಮುಲು ಅವರು, ನೀವು ಕಾಂಗ್ರೆಸ್ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಹಾಡಿ ಹೊಗಳಿದ್ದು ಬಿಜೆಪಿ ಒಳಗಡೆಯೇ ಇರಿಸು ಮುರಿಸು ಮಾಡಿತ್ತು.
The state BJP on Wednesday sought an explanation from Social Welfare and Transport Minister B Sriramulu, a day after he embarrassed the party by saying he wants to see Congress leader Siddaramaiah as chief minister again. BJP state president Nalin Kumar Kateel sought a report from Sriramulu for his speech in front of hundreds of people in Ballari on Tuesday.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm