ಬ್ರೇಕಿಂಗ್ ನ್ಯೂಸ್
23-08-22 02:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ. ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಧರಿಸುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿ ಹರಿಹಾಯ್ದಿರುವ ಅವರು, ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ. ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ' ಎಂದು ಅವರು ಪ್ರಶ್ನಿಸಿದ್ದಾರೆ. ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಆಗಲಿ ಅಥವಾ ಇನ್ಯಾರೇ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೇ? ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರು ಯಾರು? ಊಟ ತನ್ನಿಚ್ಛೆ, ನೋಟ ಪರರಿಚ್ಛೆ ಅಲ್ಲವೇ? ಭಕ್ತಿ ಶುದ್ಧವಾಗಿರಬೇಕು' ಎಂದು ಗುಂಡೂರಾವ್ ಪ್ರತಿಪಾದಿಸಿದ್ದಾರೆ.
ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೇ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ' ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ. ಅದು ಅವರ ಆಹಾರ ಪದ್ಧತಿ. ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ. ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು. ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ' ಎಂದು ಗುಂಡೂ ರಾವ್ ಪ್ರಶ್ನಿಸಿದ್ದಾರೆ.
2
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022
ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ.
ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ?
ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ.
ಭಕ್ತಿ ಶುದ್ಧವಾಗಿರಬೇಕು.
3
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022
ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ.
ಅದು ಅವರ ಆಹಾರ ಪದ್ದತಿ.
ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. C.T.ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು.
ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ?
4@siddaramaiah ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022
ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.
ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು #BJP ಯವರು ಹೇಳಲಿ
ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ?
Dinesh Gundu Rao slams BJP govt says Siddaramaiah has created fear among BJP leaders.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 10:07 pm
Mangalore Correspondent
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm