ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm