ಬ್ರೇಕಿಂಗ್ ನ್ಯೂಸ್
03-09-22 10:27 pm HK News Desk ಕರ್ನಾಟಕ
ಶಿವಮೊಗ್ಗ, ಸೆ.3 : ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಂದು ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿದ್ದ ಎನ್ ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ್ದು ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಹಿಂದೂಗಳಿಗೆ ರಕ್ಷಣೆಯಿಲ್ಲ ಎಂಬ ಕೂಗು ಕೇಳಿಬಂದಿತ್ತು. ಸರ್ಕಾರ ಹರ್ಷ ಕೊಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಲ್ಲದೆ, ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ( ಎನ್‌ಐಎ)ಗೆ ವಹಿಸಿತ್ತು. ಎನ್‌ಐಎ ತನಿಖೆ ವೇಳೆ ಆತಂಕದ ಮಾಹಿತಿ ಬೆಳಕಿಗೆ ಬಂದಿದ್ದು, ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.
750 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಫೆಬ್ರವರಿ 20 ರಂದು ರಾತ್ರಿ ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣದಲ್ಲಿ ತನಿಖೆ ಕೈಗೊಂಡಿದ್ದ ಎನ್‌ಐಎ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ 750 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಹರ್ಷ ಹತ್ಯೆಗೆ ಹದಿನೈದು ದಿನಗಳಿಂದ ಸ್ಕೆಚ್ !
ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ ಹತ್ತು ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಆರೋಪಿಗಳಿಗೆ ಹಿಂದು ಸಂಘಟನೆಯ ಕಾರ್ಯಕರ್ತನ ಹತ್ಯೆ ಮಾಡೋದು ಉದ್ದೇಶ ಆಗಿತ್ತು. ಹದಿನೈದು ದಿನದಿಂದ ಹರ್ಷನ ಹತ್ಯೆಗೆ ಕಾದು ಕುಳಿತಿದ್ದರು. ಹರ್ಷ ಹಿಂದೂ ಸಂಘಟನೆಯಲ್ಲಿ ಆಕ್ಟೀವ್ ಇದ್ದು, ಹಳೆಯ ದ್ವೇಷ ಇಟ್ಟುಕೊಂಡು ಹತ್ಯೆ ಮಾಡೋಕೆ ಪ್ರಕರಣದ ಎ1 ಆರೋಪಿ ಆಯ್ಕೆ ಮಾಡಿದ್ದ. ಇದಲ್ಲದೆ ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದು ತಮಗೆ ವಿರೋಧಿಯಾಗಿರೋ ಹರ್ಷ ಕೊಲೆ ಮಾಡುವ ಮೂಲಕ ಜಿಲ್ಲೆಯಲ್ಲಿ ಭಯ ಹುಟ್ಟಿಸೋದು ಆರೋಪಿಗಳ ಉದ್ದೇಶ ಆಗಿತ್ತು ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.
ಕೋಮು ಸೌಹಾರ್ದ ಕದಡುವ ಉದ್ದೇಶ ಇತ್ತು
ಎನ್ ಐ ಎ ಅಧಿಕಾರಿಗಳು ಬಂಧಿತ 10 ಮಂದಿ ಆರೋಪಿಗಳ ಹೇಳಿಕೆಗಳ ಜೊತೆ ತಾಂತ್ರಿಕ ಸಾಕ್ಷ್ಯಗಳನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯದ ತನಿಖೆಯಲ್ಲಿ ಆರೋಪಿಗಳು ಕೋಮು ಸೌಹಾರ್ದ ಕದಡುವ ಜೊತೆಗೆ ಗಲಾಟೆಯನ್ನುಂಟು ಮಾಡುವ ಉದ್ದೇಶವನ್ನು ತಿಳಿಸಿದ್ದಾರೆ. ಇನ್ನೂ ತನಿಖೆ ಮುಂದುವರೆದಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.
Harsha murder case, NIA submits charge sheet report.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm